ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಾಲೀಮು ನಡೆಸಿವೆ.ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕೆಳಮನೆಯಲ್ಲಿನ ತಮ್ಮ ಸದಸ್ಯ ಬಲದ ಮೇಲೆ ಚುನಾವಣೆ ಎದುರಿಸಲಿವೆ. ಬಿಜೆಪಿ 3, ಕಾಂಗ್ರೆಸ್ 7 ಹಾಗೂ ಜೆಡಿಎಸ್ 1 ಸದಸ್ಯರನ್ನು ಆಯ್ಕೆ ಮಾಡುವ ಅರ್ಹತೆ ಗಳಿಸಿವೆ.
ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಮೂರೂ ಪಕ್ಷಗಳಿಗೆ ಸವಾಲಾಗಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಕೊನೆಯ ಗಳಿಗೆಯವರಿಗೂ ಟಿಕೆಟ್ ಹಂಚಿಕೆ ಯಕ್ಷಪ್ರಶ್ನೆಯಾಗಿಯೇ ಇದೆ.
ಜೂ.3 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿರುವುದರಿಂದ ಅದರ ಒಳಗಾಗಿ ಅಭ್ಯರ್ಥಿಗಳನ್ನು ಆಯಾ ಪಕ್ಷಗಳು ೋಷಬೇಕಿದೆ.ಈ ಹಿನ್ನೆಲೆಯಲ್ಲಿ ಜೆಡಿಎಸ್ ಸೋಮವಾರ ಜೆಡಿಎಲ್ಪಿ ಹಾಗೂ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಸಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಲಾಗುತ್ತದೆ.
ಜತೆಗೆ ಮೇಲ್ಮನೆಯ ಆರು ಸ್ಥಾನಗಳಿಗೆ ನಡೆದ ಚುನಾವಣೆ, ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಿಂದ ಪಕ್ಷಕ್ಕೆ ಆಗಿರುವ ಹಾನಿ ಸೇರಿದಂತೆ ಪಕ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಈ ಸಭೆಗಳಲ್ಲಿ ಸಮಾಲೋಚನೆ ಮಾಡಲಾಗುತ್ತದೆ.
ವಿಧಾನ ಪರಿಷತ್ತಿಗೆ ಪಕ್ಷದ ಹಿರಿಯ ಮುಖಂಡರಾದ ಕುಪೇಂದ್ರ ರೆಡ್ಡಿ, ಬಿ.ಎಂ.ಫಾರೂಕ್, ಜವರಾಯಿಗೌಡ ಹೆಸರು ಚಾಲ್ತಿಯಲ್ಲಿದ್ದು, ಜವರಾಯಿಗೌಡ ಅವರ ಹೆಸರು ಘೋಷಿಸುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 + 10 =
Remember me
