ಬೆಂಗಳೂರು:ಕೋವಿಡ್-19 ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಪಕ್ಷಗಳ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೋಂಕು ಮಣಿಸುವ ಹೋರಾಟದಲ್ಲಿ ಸರ್ಕಾರದ ಜತೆ ಇರುವುದಾಗಿ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಶುಕ್ರವಾರ ಜೆಡಿಎಸ್​ ಮತ್ತು ಕಾಂಗ್ರೆಸ್​ ನಿಯೋಗ ಭೇಟಿ ಮಾಡಿತ್ತು. ನಿಯೋಗದೊಂದಿಗೆ ಸಭೆ ನಡೆಸಿದ ಸಿಎಂ, ಕರೊನಾ ಪರಿಸ್ಥಿತಿ ಕುರಿತು ಚರ್ಚಿಸಿದರು.
ಇತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮೇ 3ರ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆರ್ಥಿಕ ಚಟುವಟಿಕೆಗೆ ಅವಕಾಶ ಕಲ್ಪಿಸಲಾಗಿದೆ. ರೈತ ಮುಖಂಡರು, ಕೈಗಾರಿಕೋದ್ಯಮಿಗಳು, ಬಿಲ್ಡರ್ಸ್, ಹೋಟೆಲ್ ಮಾಲೀಕರು… ಹೀಗೆ ವಿವಿಧ ವಲಯದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರ ಸಲಹೆ ಪಡೆದು ಕ್ರಮ ವಹಿಸಲಾಗುತ್ತಿದೆ ಎಂದು ಸಿಎಂ ವಿವರಿಸಿದರು.
ಇದನ್ನೂ ಓದಿಕಡಲೆ ಬೆಳೆಗಾರನಿಗೆ ಮರ್ವಘಾತ
ಈ ಮೊದಲೇ ಕೃಷಿ ಚಟುವಟಿಕೆಗಳಿಗೆ ಲಾಕ್​ಡೌನ್​ನಿಂದ ವಿನಾಯ್ತಿ ನೀಡಲಾಗಿತ್ತು. ಕೃಷಿ ಸಚಿವರು ಎಲ್ಲ ಜಿಲ್ಲೆಗೂ ಭೇಟಿ ನೀಡಿ ವಸ್ತುಸ್ಥಿತಿ ಅರಿತಿದ್ದಾರೆ. ಬೇಸಿಗೆ ಬೆಳೆ ಕಟಾವಿಗೆ ಅಗತ್ಯ ಯಂತ್ರೋಪಕರಣಗಳನ್ನು ಹೊರ ರಾಜ್ಯಗಳಿಂದ ತರಿಸಲಾಗಿದೆ. ಬಿತ್ತನೆಬೀಜ, ರಸಗೊಬ್ಬರ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ ಎಂದು ಸಿಎಂ ಮಾಹಿತಿ ನೀಡಿದರು.
ಲಾಕ್​ಡೌನ್​ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದವರಿಗಾಗಿ 1,610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಇದೇ ರೀತಿ ಸಂಕಷ್ಟಕ್ಕೆ ಒಳಗಾಗಿರುವ ವಿವಿಧ ಸಮುದಾಯದವರಿಗೂ ನೆರವು ನೀಡುವ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಮೂಲಕ ಕಾರ್ಮಿಕರಿಗೆ ಉದ್ಯೋಗ ದೊರಕಿಸಲು ಆದ್ಯತೆ ನೀಡುತ್ತೇವೆ. ರಾಜ್ಯದಲ್ಲಿ ಕರೊನಾ ನಿಯಂತ್ರಿಸಲು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಇದನ್ನೂ ಓದಿಸರಿಯಾಗಿ ಊಟ ಮಾಡಿ 2 ತಿಂಗಳಾಯ್ತು, ಊರಿಗೆ ಕಳುಹಿಸಿ…
ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ:ಕರೊನಾ ಸೋಂಕನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಪಿಎಂ ಕೇರ್​ನಲ್ಲಿ 35 ಸಾವಿರ ಕೋಟಿ ರೂ. ಇದೆ. ಅದರಲ್ಲಿ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಖರೀದಿ ಶಕ್ತಿ ಜನರಿಗೆ ಬಂದರೆ ಆರ್ಥಿಕ ಚಟುವಟಿಕೆಗಳು ಬೆಳೆಯುತ್ತವೆ ಎಂದು ತಜ್ಞರು ಹೇಳಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವನ್ನು ನೆರವಿಗೆ ಒತ್ತಾಯಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.
ಸಿಎಂ ಘೋಷಿಸಿರುವ ವಿಶೇಷ ಪ್ಯಾಕೇಜ್ ಸ್ವಾಗತಾರ್ಹ. ಕಾರ್ಮಿಕರಿಗೆ ಒಂದೇ ಬಾರಿಗೆ 5 ಸಾವಿರ ರೂ. ಕೊಡುವ ಬದಲು ಕರೊನಾ ಮುಗಿಯುವವರೆಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡಿ. ವಿವಿಧ ಸಂಸ್ಥೆಗಳಲ್ಲಿ‌ ಸರ್ಕಾರದ ಹಣ ಇದೆ. ಆದಾಯ ಎಂದು ಹೇಳಿ ಕೇಂದ್ರ ಅದನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಇರುವ ಹಣವನ್ನು ಸಂತ್ರಸ್ತರಿಗಾಗಿ ಖರ್ಚು ಮಾಡಿ ಎಂದರು.
ಇದನ್ನೂ ಓದಿಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬಿ ಪ್ರೀತಿ ತೋರಿದ ಸಚಿವ
ಜೂನ್, ಜುಲೈ ತಿಂಗಳಲ್ಲಿ ಸೋಂಕು ತೀವ್ರವಾಗುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂಜಾಗ್ರತೆ ವಹಿಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ, ಬೆಳೆ ನಷ್ಟಕ್ಕೊಳಗಾದ ರೈತರಿಗೂ ವೈಜ್ಞಾನಿಕವಾಗಿ ಪರಿಹಾರ ಕೊಡಿ. ಅಕ್ಕಸಾಲಿಗರು, ಬಡಗಿ, ಚಮ್ಮಾರ, ದರ್ಜಿ, ಕಮ್ಮಾರ ಸೇರಿ ವಿವಿಧ ವರ್ಗದ ಜನರನ್ನೂ ವಿಶೇಷ ಪ್ಯಾಕೇಜ್​ನಲ್ಲಿ ಸೇರಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ​ಎಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಿಕ್ಷಣ ಸಚಿವ ಸುರೇಶ್ ಕುಮಾರ್ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿಬೆಳ್ಳಂಬೆಳಗ್ಗೆ ರೈಲ್ವೆ ನಿಲ್ದಾಣದಲ್ಲಿ ಪೊಲೀಸರಿಗೆ ವಲಸೆ ಕಾರ್ಮಿಕರು ತಲೆ ಬಿಸಿ ತಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − ten =
Remember me
