ಬೆಂಗಳೂರು:ಜೆಡಿಎಸ್-ಬಿಜೆಪಿ ಮೈತ್ರಿ ಈಗಾಗಲೇ ಅಂತಿಮಗೊಂಡಿದೆ. ಮಾಜಿ ಪ್ರಧಾನಿ ದೇವೇಗೌಡ ಈ ವಿಷಯವನ್ನು ಈಗಾಗಲೇ ಖಚಿತಪಡಿಸಿದ್ದೂ ಆಗಿದೆ. ಆದರೆ ಅದಕ್ಕೊಂದು ಅಧಿಕೃತ ಮುದ್ರೆ ಸೆ.19 ಇಲ್ಲವೇ 20 ರಂದು ಬೀಳಲಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಈ ಮೈತ್ರಿ ಮಾತುಕತೆ ಈ ಸಂದರ್ಭದಲ್ಲಿ ಅಂತಿಮಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಜತೆ ಮಾತುಕತೆ ನಡೆಸಲಿದ್ದಾರೆ.
ಈ ಮಧ್ಯೆ ಕರ್ನಾಟಕದಲ್ಲಿ ಜೆಡಿಎಸ್ ಜತೆಗಿನ ಮೈತ್ರಿಯ ಕುರಿತು ಅಭಿಪ್ರಾಯ ಪಡೆಯಲು ಬಿಜೆಪಿ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದೆಹಲಿಗೆ ಬರಲು ಬಿಜೆಪಿ ವರಿಷ್ಟರು ಬುಲಾವ್ ನೀಡಿದ್ದು, ಬುಧವಾರ ದೆಹಲಿಗೆ ದೌಡಾಯಿಸಲಿದ್ದಾರೆ.
ಜೆಡಿಎಸ್ ಜತೆಗಿನ ಮೈತ್ರಿಗೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ಸುಕರಾಗಿದ್ದು ಈ ಬೆಳವಣಿಗೆ ಉಭಯ ಪಕ್ಷಗಳಲ್ಲೂ ಚಟುವಟಿಕೆ ಗರಿಗೆದರುವಂತೆ ಮಾಡಿದೆ.ಸೆ. 19 ಮತ್ತು 20 ರಂದು ಬಿಜೆಪಿ-ಜೆಡಿಎಸ್ ನಾಯಕರ ನಡುವಣ ಮೈತ್ರಿ ಮಾತುಕತೆ ಫೈನಲ್ ಆಗಲಿದ್ದು ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.
ಈ ಮೈತ್ರಿ ಮಾತುಕತೆ ಸಂದರ್ಭದಲ್ಲೇ ಲೋಕಸಭಾ ಚುನಾಣೆಯಲ್ಲಿ ಟಿಕೆಟ್ ಹಂಚಿಕೆಯೂ ಅಂತಿಮಗೊಳ್ಳಲಿದೆ. ಹಳೇ ಮೈಸೂರು ಭಾಗದ 6 ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಟ್ಟಿದ್ದು, ಅದರಲ್ಲಿ ನಟಿ ಸುಮಲತಾ ಪ್ರತಿನಿಧಿಸುತ್ತಿರುವ ಮಂಡ್ಯ ಕ್ಷೇತ್ರವೂ ಸೇರಿದೆ ಎಂದು ಮೂಲಗಳು ತಿಳಿಸಿವೆ.———————
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 3 =
Remember me
