ಮೈಸೂರು:ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್​ ಅಥವಾ ಹೊಂದಾಣಿಕೆ ಮಾಡಿಕೊಳ್ಳುವ ಸೂಚನೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಳೇ ಮೈಸೂರು, ಹೊಸ ಮೈಸೂರು ಎಂದೇನಿಲ್ಲ. ಅವರು (ಜೆಡಿಎಸ್​-ಬಿಜೆಪಿ) ಎಲ್ಲ ಕಡೆಯೂ ಫಿಕ್ಸಿಂಗ್ ಮಾಡಿಕೊಳ್ಳಬಹುದು ಎಂದರು.
ವರುಣದಿಂದ ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಯಾರೇ ನಿಂತರೂ ನಾನು ಗೆದ್ದೆ ಗೆಲ್ಲುತ್ತೇನೆ. ಕಳೆದ ಚುನಾವಣೆಯಲ್ಲಿ ಸೋತ ಬಳಿಕ ರಾಹು-ಕೇತುಗಳು ಒಂದಾದವು ಎಂದು ನಾನು ಹೇಳಿದ್ದೆ. ಆದರೆ, ಈಗ ನಾನು ಆ ಪದ ಬಳಸುವುದಿಲ್ಲ. ಬಳಸಿದರೆ ಅವರು ಈಗ ಸಿಟ್ಟಾಗುತ್ತಾರೆ. ನಾನು ಈ ಬಾರಿ ಗೆಲ್ಲುತ್ತೇನೆ. ಜನ ನನ್ನ ಪರವಾಗಿ ಇದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ದಕ್ಷಿಣ ರೈಲ್ವೇ ಫೇಸ್​ಬುಕ್ ಪೇಜ್ ಹ್ಯಾಕ್! ಕಾರ್ಟೂನ್ ಫೋಟೋ ಅಪ್ಲೋಡ್ ಮಾಡಿದ ಸೈಬರ್ ಕಳ್ಳರು
ರಾಜ್ಯದಲ್ಲಿ ಆಡಳಿತ ಪಕ್ಷ ಈ ಬಾರಿ ಚುನಾವಣಾ ಅಕ್ರಮದಲ್ಲಿ ತೊಡಗುವ ಸಾಧ್ಯತೆ ಇದೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ನಡೆಸಲು ಮುಂದಾಗಬೇಕು. ಆಡಳಿತ ಪಕ್ಷ ಇರಲಿ ಯಾವುದೇ ಪಕ್ಷ ಇರಲಿ ಅಕ್ರಮ ಮಾಡಿದರೆ ಕ್ರಮ ಕೈಗೊಳ್ಳಬೇಕು. ಆಡಳಿತ ಪಕ್ಷಕ್ಕೊಂದು ವಿರೋಧ ಪಕ್ಷಗಳಿಗೊಂದು ನ್ಯಾಯ ಮಾಡಬಾರದು ಎಂದರು.
ಕಾಂಗ್ರೆಸ್ ಎರಡನೇ ಪಟ್ಟಿ ಒಂದೆರೆಡು ದಿನದಲ್ಲಿ ಬಿಡುಗಡೆಯಾಗುತ್ತದೆ. ಇವತ್ತು ಸ್ಕ್ರೀನಿಂಗ್ ಕಮಿಟಿ ಸಭೆ ಇದೆ. ಸಭೆ ಮುಗಿಸಿ ಅದನ್ನು ಹೈಕಮಾಂಡ್​ಗೆ ಕಳುಹಿಸುತ್ತೇವೆ. ಆ ನಂತರ ಪಟ್ಟಿ ಬಿಡುಗಡೆಯಾಗುತ್ತದೆ‌. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಗಾಳಿ ಬೀಸುತ್ತಿದೆ. ಹೀಗಾಗಿ ಟಿಕೆಟ್​ಗಾಗಿ ಸಾಕಷ್ಟು ಜನರು ಪೈಪೋಟಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬಹಳ ದೊಡ್ಡ ಮಟ್ಟದಲ್ಲಿ ಇರುವುದು ಸತ್ಯ ಎಂದು ಹೇಳಿದರು.
ನಾನು ವರುಣ ಕ್ಷೇತ್ರದ ಪ್ರಚಾರಕ್ಕೆ ಹೋಗಲ್ಲ. ನಾಮಪತ್ರ ಸಲ್ಲಿಕೆಗೆ ಮಾತ್ರ ವರುಣ ಕ್ಷೇತ್ರಕ್ಕೆ ಹೋಗುತ್ತೇನೆ. ಉಳಿದಿದ್ದ ಎಲ್ಲಾ ಪ್ರಚಾರವನ್ನು ಯತೀಂದ್ರ ನೋಡಿಕೊಳ್ಳುತ್ತಾನೆ. ನಾನು ರಾಜ್ಯ ಪ್ರವಾಸ ಮಾಡಬೇಕಿದೆ. ಹೆಲಿಕಾಪ್ಟರ್​ನಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. ದಿನಕ್ಕೆ ನಾಲ್ಕು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ. ಈಗಾಗಲೇ ಪ್ರಜಾಧ್ವನಿ ಯಾತ್ರೆಯ ಮೂಲಕ 60ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಡಿ.ಕೆ ಶಿವಕುಮಾರ್ ಸಹ ಪ್ರಚಾರ ನಡೆಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಚರಂಡಿ ಯಾವಾಗ ಮಾಡಿಸ್ತೀರಾ ಶಾಸಕರೇ? ದಿಗ್ಬಂಧನ ಹಾಕಿ ತರಾಟೆಗೆ ತೆಗೆದುಕೊಂಡ ಮಹಿಳೆಯರು!
ಇದೇ ನನ್ನ ಕೊನೆ ಚುನಾವಣೆ ಎಂದು ಎರೆಡೆರೆಡು ಬಾರಿ ಉಚ್ಚರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ಚುನಾವಣೆ ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದರು. ಹುಟ್ಟೂರಿನ ಕ್ಷೇತ್ರದಿಂದಲೇ ಸ್ಪರ್ಧಿಸಿ ನಿವೃತ್ತಿಯಾಗಬೇಕೆಂಬುದು ನನ್ನ ಬಯಕೆ. ಹೀಗಾಗಿ ನಾನು ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ನನಗೆ ಸ್ವಲ್ಪ ಅನುಮಾನ ಇತ್ತು. ಹೀಗಾಗಿ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಿದೆ. ಈ ಬಾರಿ ನನಗೆ ಯಾವ ಅನುಮಾನಗಳು ಇಲ್ಲ. ಆದರೆ, ಕೋಲಾರದ ಜನ ಒತ್ತಾಯದಿಂದ ಕರೆಯುತ್ತಿರುವ ಕಾರಣ ಅಲ್ಲೂ ನಿಲಲ್ಲು ಟಿಕೆಟ್ ಕೊಡಿ ಎಂದು ಕೇಳಿದ್ದೇನೆ. ಅಂತಿಮ ತೀರ್ಮಾನ ಹೈ ಕಮಾಂಡ್​​ಗೆ ಬಿಟ್ಟಿದ್ದು‌, ನನಗೆ ಕ್ಷೇತ್ರ ಇಲ್ಲ ಎನ್ನುವುದೆಲ್ಲ ಅರ್ಥವಿಲ್ಲದ ಮಾತು. ನನಗೆ 25 ಕ್ಷೇತ್ರದಲ್ಲೂ ಗೆಲ್ಲುವ ಅವಕಾಶ ಇರುವ ಕಾರಣ ನನಗೆ ಆಹ್ವಾನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.(ದಿಗ್ವಿಜಯ ನ್ಯೂಸ್​)
ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ; ಮೇ 10 ಮತದಾನ, ಮೇ 13ರಂದು ಫಲಿತಾಂಶ

ನಕಲಿ ಔಷಧ ತಯಾರಿಸುವ 18 ಕಂಪನಿಗಳ ಪರವಾನಗಿ ರದ್ದುಗೊಳಿಸಿದ ಸರ್ಕಾರ

ದಕ್ಷಿಣ ರೈಲ್ವೇ ಫೇಸ್​ಬುಕ್ ಪೇಜ್ ಹ್ಯಾಕ್! ಕಾರ್ಟೂನ್ ಫೋಟೋ ಅಪ್ಲೋಡ್ ಮಾಡಿದ ಸೈಬರ್ ಕಳ್ಳರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 5 =
Remember me
