ದಾಸರಹಳ್ಳಿ:ಜೆಡಿಎಸ್ ಪಕ್ಷದ ಈ ಹಿಂದೆ ಜಾರಿಗೆ ತಂದಿದ್ದ ‘ಶೂನ್ಯ ಬಡ್ಡಿದರ ಸಾಲ’, ‘ಬಡವರ ಬಂಧು’ ಯೋಜನೆಗಳು ಬೀದಿಬದಿ ವ್ಯಾಪಾರಿಗಳಿಗೆ ಆಸರೆಯಾಗಿತ್ತು ಎಂದು ದಾಸರಹಳ್ಳಿ ಜೆಡಿಎಸ್ ಅಭ್ಯರ್ಥಿ ಆರ್. ಮಂಜುನಾಥ್ ಹೇಳಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ವ್ಯಾಪಾರಿಗಳ ಕಷ್ಟ ಕಾರ್ಪಣ್ಯಗಳನ್ನು ಆಲಿಸುವುದರ ಜತೆಗೆ ಪಕ್ಷದ ಪ್ರಮುಖ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಚರ್ಚೆ ನಡೆಸಿ ಮತಯಾಚನೆ ಮಾಡಿದರು.
ದಾಸರಹಳ್ಳಿಯಲ್ಲಿ ಮತಯಾಚನೆ:
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿದ್ದ ಎಚ್. ಡಿ ಕುಮಾರಸ್ವಾಮಿ ಅವರು ಬೀದಿಬದಿ ವ್ಯಾಪಾರಿಗಳಿಗೆ ನೆರವಾಗಲು ಶೂನ್ಯ ಬಡ್ಡಿ ದರದಲ್ಲಿ 10 ಸಾವಿರ ರೂ. ಸಾಲ ನೀಡುತ್ತಿದ್ದರು. ಬಡ ವ್ಯಾಪಾರಿಗಳ ಜೀವನ ನಿರ್ವಹಣೆಗೆ ಇದರಿಂದ ಬಹಳ ಅನುಕೂಲವಾಗುತ್ತಿತ್ತು. ಹಾಗಾಗಿ ಶ್ರಮಿಕರು, ಕಾರ್ವಿುಕರು, ರೈತರ ಕಲ್ಯಾಣಕ್ಕೆ ಶ್ರಮಿಸಿರುವ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ದಾಸರಹಳ್ಳಿಯಿಂದ ನನ್ನನ್ನು ಆರಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ:ಟ್ರಕ್‌ಗೆ ಬಸ್ ಡಿಕ್ಕಿ ; 7 ಜನ ಮೃತ್ಯು, 40 ಮಂದಿಗೆ ಗಂಭೀರ ಗಾಯ!
ಮಂಜುನಾಥ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದಂತೆ ಸ್ಥಳಿಯ ವ್ಯಾಪಾರಿಗಳು ‘ದಾಸರಹಳ್ಳಿ ಕ್ಷೇತ್ರಕ್ಕೆ ಮತ್ತೊಮ್ಮೆ ಮಂಜಣ್ಣ’ ಎಂದು ಜೈಕಾರ ಕೂಗುತ್ತ ಆಹ್ವಾನಿಸಿದರು. ಶಾಸಕರ ಅವಧಿಯಲ್ಲಿ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗಾಗಿ ಕೈಗೊಂಡಿದ್ದ ಯೋಜನೆಗಳು ಹಾಗೂ ಸ್ಥಳಿಯವಾಗಿ ವ್ಯಾಪಾರಿಗಳು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದನ್ನು ವ್ಯಾಪಾರಿಗಳು ಶಾಸಕರ ಬಳಿ ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳನ್ನು ರೂಪಿಸುವುದಾಗಿ ಭರವಸೆ ನೀಡಿದರು. ಬೀದಿಬದಿ ವ್ಯಾಪಾರಿಗಳು ಕೂಡ ಸಾರ್ವಜನಿಕ ವಲಯದಲ್ಲಿ ಬೆಳವಣಿಗೆ ಕಾಣಬೇಕು ಹಾಗೂ ಸ್ಥಳೀಯವಾಗಿ ನಿತ್ಯ ವ್ಯಾಪಾರಕ್ಕೆ ಅಗತ್ಯವಿರುವ ಎಲ್ಲ ಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೆಬ್ಬಾಳ, ಚಿತ್ತಾಪುರ ಬಿಜೆಪಿ ಟಿಕೆಟ್ ಆಕಾಂಕ್ಷಿ ಅರವಿಂದ ಚವ್ಹಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
