ಬೆಂಗಳೂರು:ಮಾದರಿ ಕ್ಷೇತ್ರ ನಿರ್ವಣಕ್ಕೆ ಉತ್ತಮ ಕೆಲಸಗಾರ ಬೇಕೇ ಹೊರೆತು, ಮಾತುಗಾರನಲ್ಲ. ಕೆಲಸಗಾರ ತನ್ನ ಕಾರ್ಯದ ಮೂಲಕ ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡುತ್ತಾನೆ. ಆದರೆ, ಮಾತುಗಾರ ಕೇವಲ ಮಾತುಗಳಿಂದಲೇ ಜನರನ್ನು ಮರಳು ಮಾಡುವ ಪ್ರಯತ್ನ ಮಾಡುತ್ತಾನೆ ಎಂದು ಜೆಡಿಎಸ್ ಶಾಸಕ ಆರ್. ಮಂಜುನಾಥ್ ಆರೋಪಿಸಿದ್ದಾರೆ.
ದಾಸರಹಳ್ಳಿ ಕ್ಷೇತ್ರದ ಹೆಗ್ಗನಹಳ್ಳಿ ರಾಜಗೋಪಾಲ್ ನಗರ ವಾರ್ಡ್​ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮನೆ ಮನೆಗೆ ಭೇಟಿ, ಮತ್ತೊಮ್ಮೆ ಮಂಜಣ್ಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾತುಗಾರನ ಟೀಕೆಗಳು ಕಾಲ ಕಳೆಯುತ್ತಿದ್ದಂತೆ ಸಾಯುತ್ತವೆ. ಆದರೆ ಕೆಲಸಗಾರನ ಕೆಲಸಗಳು ಮಾತ್ರ ಜೀವಂತವಾಗಿ ಉಳಿಯಲಿವೆ. ನಮಗೆ ಜನರ ಬದುಕು ಮುಖ್ಯ. ಅವರ ಮಕ್ಕಳ ಭವಿಷ್ಯ ಮುಖ್ಯ. ಮುಂದಿನ 5 ವರ್ಷದಲ್ಲಿ ಪ್ರತಿ ಮನೆಗೆ ಉದ್ಯೋಗ ನೀಡುವ ಕೆಲಸ ಮಾಡುತ್ತೇನೆ. ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದರಿಂದ ಸ್ಥಳಿಯರಿಗೆ ಹೆಚ್ಚು ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಮಂಡ್ಯದಲ್ಲಿಂದು ಯೋಗಿ ಆದಿತ್ಯನಾಥ್ ಅಬ್ಬರ: ಒಕ್ಕಲಿಗ ಸಮುದಾಯದ ಮನಗೆಲ್ಲಲು ಬಿಜೆಪಿಯಿಂದ ಯೋಗಿ ಅಸ್ತ್ರ!
ರೈತ ಕುಟುಂಬದಿಂದ ಬಂದ ನಾನು ಬಡವರ ಕಷ್ಟ ಸುಖಗಳನ್ನು ಹತ್ತಿರದಿಂದ ಕಂಡಿದ್ದೇನೆ. ನನ್ನ ಅವಧಿಯಲ್ಲಿ ಬಡವರಿಗೆ ಅನುಕೂಲವಾಗುವ ಕೆಲಸ ಮಾಡಿದ್ದೇನೆ. ನನ್ನನ್ನು ಈ ಬಾರಿ ಮತದಾರರು ಕೈ ಹಿಡಿದರೆ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ. ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೊಳೆಗೇರಿ ಪ್ರದೇಶ ಅಭಿವೃದ್ಧಿಪಡಿಸಿ ಮನೆ, ಆಸ್ಪತ್ರೆ ಕುಡಿಯುವ ನೀರಿನ ಘಟಕ, ಆಸ್ಪತ್ರೆ ಕಲ್ಪಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದರು.
ಗಾಂಧಿನಗರದ ಕೊಳೆಗೇರಿಗಳ ಅಭಿವೃದ್ಧಿಗೆ ಆದ್ಯತೆ: ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ಭರವಸೆ

ಒಳ ಒಪ್ಪಂದದಿಂದ ಮಣಿಸಲು ಅಸಾಧ್ಯ; ಕಾಂಗ್ರೆಸ್-ಜೆಡಿಎಸ್ ವಿರುದ್ಧ ಸಚಿವ ಎಸ್.ಟಿ. ಸೋಮಶೇಖರ್ ಆಕ್ರೋಶ

ಬೆಂಗಳೂರಿನಲ್ಲಿ 14 ಅಡಿ ಉದ್ದದ ಹೆಬ್ಬಾವು ಪತ್ತೆ: ನೀರಿನ ಚಾನಲ್​ನಲ್ಲಿ ಅವಿತಿದ್ದ ಉರಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 7 =
Remember me
