ಬೆಂಗಳೂರು:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಮೋದಿ’ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾದರಿಯಲ್ಲೇ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ‘ಗೌಡ’ರ ವಿರುದ್ಧ ಮಾತನಾಡಿದ್ದು, ವಿವಾದಾತ್ಮಕವಾಗಿ ಪರಿಣಮಿಸಿದೆ. ಮಾತ್ರವಲ್ಲ, ಪ್ರಶಾಂತ್ ಸಂಬರಗಿ ವಿರುದ್ಧ ದೂರು ಕೂಡ ನೀಡಲಾಗಿದೆ.
ನೀರವ್ ಮೋದಿ, ಲಲಿತ್ ಮೋದಿ ಅವರ ವಿರುದ್ಧ ಮಾತನಾಡುತ್ತ, ಅವರನ್ನು ಪ್ರಧಾನಿ ಮೋದಿ ಅವರಿಗೆ ಹೋಲಿಸಿ, ಮೋದಿ ಎನ್ನುವ ಹೆಸರಿರುವವ ಎಲ್ಲರೂ ಹೀಗೆ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ರಾಹುಲ್ ಗಾಂಧಿ ವಿರುದ್ಧ, ಸೂರತ್​ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್ ಮೋದಿ ಕೇಸು ದಾಖಲಿಸಿದ್ದು, ಈ ಪ್ರಕರಣದಲ್ಲಿ ಅಲ್ಲಿನ ನ್ಯಾಯಾಲಯ ರಾಹುಲ್​ ಗಾಂಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ:ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!
ಇದೇ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಪ್ರಶಾಂತ್ ನಿಂಬರಗಿ, ದೇವೇಗೌಡರ ವಿರುದ್ಧ ಅದರಲ್ಲೂ ಗೌಡ ಸಮುದಾಯಕ್ಕೆ ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನು ಖಂಡಿಸಿರುವ ಜೆಡಿಎಸ್ ಕಾನೂನು ಘಟಕದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಮುಂತಾದವರು ಸಂಬರಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

ಪೊಲೀಸರಿಂದಲೇ ಅಪಹರಣ, ಹಣಕ್ಕೆ ಬೇಡಿಕೆ?; ತಲೆಮರೆಸಿಕೊಂಡಿರುವ ಸಬ್​ ಇನ್​ಸ್ಪೆಕ್ಟರ್!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 − two =
Remember me
