ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ವಿರುದ್ಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಜೆಡಿಎಸ್ ದೂರು ನೀಡಿದೆ.
ಜೆಡಿಎಸ್‌ನ ಬೆಂಗಳೂರು ಮಹಾನಗರ ಯುವ ಘಟಕ ಅಧ್ಯಕ್ಷ ಎ.ಎಂ. ಪ್ರವೀಣ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಮಲ್ ಪಂತ್‌ರನ್ನು ಭೇಟಿ ಮಾಡಿ ದೂರು ನೀಡಿದರು. ಮಾರ್ಚ್ 30ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಕುಮಾರಸ್ವಾಮಿ ಅವರನ್ನು ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿರುತ್ತಾರೆ. ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿರುವ ಜಮೀರ್ ಅಹಮದ್ ಖಾನ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಮರಳಿನಲ್ಲೇ ನಿರ್ಧಾರವಾಗುತ್ತೆ ಮೊಸಳೆಯ ಲಿಂಗ! ಮೊಟ್ಟೆಯೊಡೆದಾಗ ಅದು ಗಂಡೂ ಅಲ್ಲ ಹೆಣ್ಣೂ ಅಲ್ಲ!

ಹಸೆಮಣೆ ಏರಬೇಕಿದ್ದವ ಹೆಣವಾದ! ನಕ್ಸಲ್​ ದಾಳಿಗೆ ಹುತಾತ್ಮನಾದ ಯೋಧನ ಕುಟುಂಬದ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
