ಬೆಂಗಳೂರು:ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಕ್ಷೇತ್ರಗಳ ಚುನಾವಣಾ ತಂತ್ರಗಾರಿಕೆ, ಪ್ರಚಾರದಲ್ಲಿ ಪಾಲ್ಗೊಳ್ಳುವಿಕೆ ಕುರಿತು ಏ.30 ರಂದು ಕೋರ್ ಕಮಿಟಿ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೇ 7 ರಂದು ಕಿತ್ತೂರು/ ಕಲ್ಯಾಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಚುನಾವಣೆ ನೆಡೆಯುತ್ತಿದೆ. ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಈ ಅಭ್ಯರ್ಥಿಗಳ ಗೆಲುವಿಗೆ ಹೋರಾಟ ರೂಪಿಸಲು ಜೆಡಿಎಸ್ ಎಲ್ಲ ಮುಖಂಡರು, ಮಾಜಿ ಹಾಗೂ ಹಾಲಿ ಶಾಸಕರನ್ನು ಒಳಗೊಂಡಂತೆ ಕೋರ್ ಕಮಿಟಿ ಸಭೆ ನಡೆಸಲಾಗುವುದು ಎಂದರು.ಆ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲ ನಾಯಕರು ಭಾಗಿಯಾಗಲಿದ್ದಾರೆ. 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಎಲ್ಲ ನಾಯಕರುಗಳು ಸಭೆ ಆಗಮಿಸಲಿದ್ದಾರೆ. ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಜತೆ ಸಂಘರ್ಷ ಸಲ್ಲದು. ಕೇಂದ್ರದ ವಿರುದ್ಧ ಕುಸ್ತಿ ಮಾಡಲು, ಚುನಾವಣಾ ಸಂದರ್ಭದಲ್ಲಿ ಜವಾಬ್ದಾರಿ ಹಾಕಲು ಇದು ಒಳೆಯ ಸಂದರ್ಭ ಅಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ನೆರೆ ಸಂತ್ರಸ್ಥರಿಗೆ ದೊಡ್ಡ ಮೊತ್ತದ ಪರಿಹಾರ ನೀಡಲಾಗಿತ್ತು. ಈ ಸರ್ಕಾರ ಬರ ಪರಿಹಾರಕ್ಕೆ 2 ಸಾವಿರ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಎಲ್ಲೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ. ಕೇಂದ್ರ ಸರ್ಕಾರ ನೀಡಿದ 600 ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಬಳಿಸಿದ್ದೀರಾ? ಸ್ವಂತಕ್ಕೆ ವರ್ಗಾವಣೆ ಮಾಡಿಕೊಂಡಿದ್ದೀರಾ ಎಂದು ಪ್ರಶ್ನಿಸಿದರು.ಜಾನುವಾರು ಸಂರಕ್ಷಣೆ, ಕುಡಿಯುವ ನೀರಿಗೆ ಏನು ಮಾಡದ ಸರ್ಕಾರ ಅಂದ್ರೆ ಅದು ಕರ್ನಾಟಕದ ಕಾಂಗ್ರೆಸ್ ಸರ್ಕಾರ. ಬರಗಾಲಕ್ಕೆ ಹಣ ಖರ್ಚು ಮಾಡದೆ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಆದರೆ ಕೇಂದ್ರ ಸರ್ಕಾರ ವಿರುದ್ಧ ದಾಳಿ ನಡೆಸುತ್ತಿರುವುದು ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಹಣದ ಹೊಳೆ ಹರಿಸಿದೆ. ಚುನಾವಣೆಗೆ ಎಲ್ಲ ರೀತಿಯ ಪ್ರಭಾವ ಬೀರಿದೆ. ಆದಾಗ್ಯೂ 14 ಕ್ಷೇತ್ರಗಳ ಪೈಕಿ ಒಂದೋ ಎರಡೋ ಕ್ಷೇತ್ರಗಳಲ್ಲಿ ಹಿನ್ನಡೆಯಾಗಬಹುದಷ್ಟೆ ಎಂದು ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − 15 =
Remember me
