ಬೆಂಗಳೂರು:ತಾಜ್​ ವೆಸ್ಟ್​ ಎಂಡ್​ ಹೋಟೆಲ್​ ಹೆಸರನ್ನು ಉಲ್ಲೇಖಿಸಿ ಕಾಂಗ್ರೆಸ್​ ಮಾಡಿರುವ ಪ್ರಶ್ನೆಗಳಿಗೆ ಜೆಡಿಎಸ್​ ಪಕ್ಷ ಖಡಕ್​ ತಿರುಗೇಟು ನೀಡಿದೆ.
ಜೆಡಿಎಸ್​ ಅಧಿಕೃತ ಟ್ವಿಟರ್​ ಖಾತೆಯಿಂದ ಅರಣಿ ಟ್ವೀಟ್​ ಮಾಡಿದ್ದು, ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿಯಾಗಿದೆ. ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ಕಮೀಷನ್ ಕಾಂಗ್ರೆಸ್​ನ ಹೊಸ ವರಸೆ ಮತ್ತು ಹೊಸ ಕಸವರಿಕೆ.
ಇದನ್ನೂ ಓದಿ:ನ.1ರಿಂದ ರಾಜ್ಯಾದ್ಯಂತ ವರ್ಷಪೂರ್ತಿ ಕನ್ನಡ ಹಬ್ಬ ಆಚರಣೆ: ಕರ್ನಾಟಕ ಮರುನಾಮಕರಣಕ್ಕೆ 50 ವರ್ಷ ಪೂರ್ತಿ
ಮಾಜಿ ಮುಖ್ಯಮಂತ್ರಿಗಳಾದ ಎಚ್​.ಡಿ.ಕುಮಾರಸ್ವಾಮಿ ಅವರು ವೈಎಸ್​ಟಿ ತೆರಿಗೆ ಬಗ್ಗೆ ಹೇಳಿ, ಕಾಸಿಗಾಗಿ ಹುದ್ದೆ ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ಅವಿವೇಕ ಕಾಂಗ್ರೆಸ್​ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ ಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ.
ವೆಸ್ಟ್‌ ಎಂಡ್‌ ಬಾಡಿಗೆ ಮಾತಿರಲಿ, ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ, ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ಲುಲುಕುಮಾರ್​ಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ. ಹಾಗಿದ್ದರೆ ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ!?
ವೆಸ್ಟ್‌ʼಎಂಡ್‌ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ!! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ!? 4/4#LuLuKumar
— Janata Dal Secular (@JanataDal_S)July 5, 2023

ವೆಸ್ಟ್‌ ಎಂಡ್‌ ಲೆಕ್ಕ ಇರಲಿ, ಸಿಎಂ ಟಿಪ್ಪಣಿ ಬಿಕರಿಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ! ಇದ್ಯಾವ ಸೀಮೆ ಅರ್ಥಶಾಸ್ತ್ರ? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ ಇದು. ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ ವೈಎಸ್​ಟಿ ತೆರಿಗೆ ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ. ಪಾಪ ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲ ಪಂಗನಾಮ ಎಂದು ಸರಣಿ ಟ್ವೀಟ್​ ಮೂಲಕ ತಿರುಗೇಟು ನೀಡಿದೆ.
ಇದನ್ನೂ ಓದಿ:ಸದನದಲ್ಲಿ ಗ್ಯಾರಂಟಿ ಕದನ: ನಿಲುವಳಿ ಕುರಿತು ಚರ್ಚೆಗೆ ಪಟ್ಟು; ಕೈ ವಿರುದ್ಧ ಬಿಜೆಪಿ ಹೋರಾಟ
ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಎಚ್​.ಡಿ.ಕುಮಾರಸ್ವಾಮಿ ಅವರೇ? ಅಲ್ಲೊಂದು ಖಾಯಂ ಅಡ್ಡ ತೆರೆದಿದ್ದೀರಿ ಅಂದರೆ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ವೆಸ್ಟ್ ಎಂಡ್ ಹೋಟೆಲಿಗೆ ಜಮೀನಿನಲ್ಲಿ ಉಳುಮೆ ಮಾಡಿ, ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ “ಕೆಎಸ್​ಟಿ” ಸಂಗ್ರಹದ ಹಣ ಬಳಸುತ್ತಿದ್ದೀರಾ? ಕೆಸ್​ಟಿ ಕುಮಾರ್​ ಅವರು ಉತ್ತರಿಸಬೇಕು ಎಂದು ಕಾಂಗ್ರೆಸ್​ ಟ್ವೀಟ್​ ಮೂಲಕ ಪ್ರಶ್ನೆ ಮಾಡಿತ್ತು.
ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಒಂದು ದಿನದ ಬಾಡಿಗೆ ಎಷ್ಟು@hd_kumaraswamyಅವರೇ?
ಅಲ್ಲೊಂದು ಖಾಯಂ ಅಡ್ಡ ತೆರೆದಿದ್ದೀರಿ ಅಂದರೆ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ?
ವೆಸ್ಟ್ ಎಂಡ್ ಹೋಟೆಲಿಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ "KST" ಸಂಗ್ರಹದ ಹಣ ಬಳಸುತ್ತಿದ್ದೀರಾ?#KSTkumaraಅವರು ಉತ್ತರಿಸಬೇಕು.
— Karnataka Congress (@INCKarnataka)July 4, 2023

ಸಜ್ಜನರ ಸಹವಾಸದ ಫಲ

ಇಕ್ಕಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು; ಮಕ್ಕಳಿಗಿಲ್ಲ ಹಾಲಿನಪುಡಿ ಭಾಗ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
