ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ವಿಧಾನಸೌಧದಲ್ಲಿರುವ ಗೃಹ ಸಚಿವರ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.
ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಪಕ್ಷದ ರಾಜ್ಯದ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಮುಖಂಡ ಕೆ.ಮಂಜು ಅವರು ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ನಮ್ಮ ಪಕ್ಷದ ನಾಯಕರ ವಿರುದ್ಧ ಜೆಡಿಎಸ್ ಕಚೇರಿ ಆವರಣದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿದರು. ಯಾರು ಹೀಗೆ ಮಾಡಿದ್ದಾರೆ ಎಂದು ನಾವು ಕೂಡ ಪರಿಶೀಲನೆ ನಡೆಸಿ ಪೋಲಿಸ್ ಕಮಿಷನರ್‌ಗೆ ದೂರು ನೀಡಿದ್ದೆವು. ಕಮಿಷನರ್ ಸೂಚನೆಯಂತೆ ದೂರು ದಾಖಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ಪೋಲಿಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಚಿಕ್ಕವಯಸ್ಸಿನಲ್ಲೇ ವಿಧಾನ ಪರಿಷತ್ ಸದಸ್ಯನಾಗಿದ್ದೇನೆ ಎಂದು ನನ್ನ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಅವರುಗಳಂತೆ ಜಾಮೀನು ತೆಗೆದುಕೊಂಡು ಓಡಾಡುತ್ತಿಲ್ಲ. ಎಸ್ ಮನೋಹರ್ ವಿರುದ್ಧ ನಾನು ಕಾಂಗ್ರೆಸ್ ವರಿಷ್ಠ ನಾಯಕರಿಗೂ ಕೂಡ ಪತ್ರ ಬರೆಯುತ್ತೇನೆ ಎಂದರು.
ಕುಮಾರಸ್ವಾಮಿಯವರು ಈ ಸರಕಾರದ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾರೆ ಎನ್ನುವ ಕಾರಣಕ್ಕೆ ಅವರ ವಿರುದ್ಧ ಪೋಸ್ಟರ್ ಅಂಟಿಸಿದ್ದಾರೆ. ಮನೋಹರ್ ಪೋಸ್ಟರ್ ಅಂಟಿಸಿರುವುದಕ್ಕೆ ನಮ್ಮ ಬಳಿ ಸಾಕ್ಷಿ ಪುರಾವೆಗಳಿದೆ. ಮನೋಹರ್ ರೀತಿಯಲ್ಲಿ ನೀಚಗೆಟ್ಟ,ಕೀಳುಮಟ್ಟದ ರಾಜಕೀಯ ನಾವು ಮಾಡಲ್ಲ. ಮನೋಹರ್ ಒಬ್ಬ ಕೊಲೆಗಡುಕ ಎಂದು ಅವರ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ದಾಖಲೆ ಬಿಡುಗಡೆ ಮಾಡಿದರು.ಕೂಡಲೇ ಕಾಂಗ್ರೆಸ್ ಕಾರ್ಯಕರ್ತ ಎಸ್.ಮನೋಹರ್ ಬಂಧನವಾಗದಿದ್ದರೆ ವಿಧಾನಸೌಧದ ಗೃಹ ಸಚಿವರ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮಾತನಾಡಿ, ಸರ್ಕಾರ, ಪೊಲೀಸ್ ಕಮಿಷನರ್ ಮತ್ತು ಗೃಹ ಸಚಿವರು ಒಬ್ಬೊಬ್ಬರಿಗೆ ಒಂದೊಂದು ರೀತಿಯ ಕಾನೂನು ಮಾಡಬಾರದು. ಎಲ್ಲ ಪಕ್ಷಕ್ಕೂ ಒಂದೇ ನಿಯಮ. ಜೆಡಿಎಸ್ ಕಾರ್ಯಕರ್ತ ಬೆಟ್ಟಪ್ಪ ಎಂಬಾತ ಫೇಸ್ ಬುಕ್‌ನಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದಕ್ಕೆ ಕೆ.ಜಿ.ಎ್ ಪೊಲೀಸ್ ಸ್ಟೇಷನ್‌ನಲ್ಲಿ ಜಾಮೀನುರಹಿತ ಕೇಸ್ ದಾಖಲಿಸುತ್ತಾರೆ. ಆದರೆ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದವರು ರಾಜರೋಷವಾಗಿ ಓಡಾಡಿಕೊಂಡಿದ್ದಾರೆ. ನಮಗೊಂದು ಅವರಿಗೊಂದು ಕಾನೂನು ಸರಿಯಲ್ಲ ಎಂದು ಹೇಳಿದರು.ಮುಖಂಡರಾದ ಪ್ರವೀಣ್, ಚಂದ್ರಶೇಖರ್ ಮುಂತಾದವರು ಹಾಜರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + twenty =
Remember me
