ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತದಾರರ ಮೇಲೆ ಪ್ರಭಾವ ಬೀರುವಂತಹ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದ್ದು, ಇದಕ್ಕೆ ತಕ್ಷಣ ತಡೆ ನೀಡಬೇಕು ಎಂದು ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ವೆಂಕಟರಾವ್ ನಾಡಗೌಡ , ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ , ಆರ್. ಪ್ರಕಾಶ್ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಪಾರದರ್ಶಕ, ನಿರ್ಭೀತ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮವೂ ಆಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆ ಗ್ಯಾರಂಟಿ ಕಾರ್ಡುಗಳ ಹಂಚಿಯನ್ನು ತಡೆಯಬೇಕು ಹಾಗೂ ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ನಿಯೋಗ ಅಗ್ರಹಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 20 =
Remember me
