ಬೆಂಗಳೂರು:ಕರೊನಾ ಹಾವಳಿ ಮುಂದುವರಿದಿದ್ದು, ಸೋಂಕಿತರ ಸಂಖ್ಯೆಯಷ್ಟೇ ಅಲ್ಲದೆ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ತೀವ್ರಗತಿಯಲ್ಲಿ ಏರುತ್ತಿದೆ. ಕರೊನಾ ಎರಡನೇ ಅಲೆಗೆ ಮಧ್ಯವಯಸ್ಕರೂ ಬಲಿಯಾಗುತ್ತಿದ್ದು, ಹಿರಿಯ ನಾಗರಿಕರು ಕೂಡ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಈಗಾಗಲೇ ಬಹಳಷ್ಟು ರಾಜಕಾರಣಿಗಳಲ್ಲದೆ ಅವರ ಸಂಬಂಧಿಕರೂ ಕೋವಿಡ್‌-19 ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಇದೀಗ ಜೆಡಿಎಸ್‌ ಮುಖಂಡ, ವಿಧಾನಪರಿಷತ್‌ ಮಾಜಿ ಸದಸ್ಯ ಟಿ.ಎ. ಶರವಣ ಅವರ ತಾಯಿ ಸಹ ಕರೊನಾದಿಂದಾಗಿ ಮೃತಪಟ್ಟಿದ್ದಾರೆ. ಶರವಣ ಅವರ ತಾಯಿ ಧನಲಕ್ಷ್ಮಮ್ಮ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.
ಧನಲಕ್ಷ್ಮಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಶರವಣ ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೇರಿ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಜಗತ್ತಿನಲ್ಲಿನ ಕೋವಿಡ್‌ ಸಾವುಗಳ ಪೈಕಿ ಕಾಲುಭಾಗದಷ್ಟು ಇಲ್ಲೇ ಆಗಿವೆ!: ಸಮೀಕ್ಷೆಯೊಂದರಿಂದ ಬಹಿರಂಗ

ಈಕೆಯ ಪ್ರಪ್ರಥಮ ರಕ್ತದಾನವೇ ಅವಿಸ್ಮರಣೀಯ; ಕರೊನಾ ಆತಂಕದಲ್ಲೂ ಇವಳಿಂದ ಉಳಿಯಿತು ಒಂದಲ್ಲ ಎರಡು ಜೀವ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twelve − twelve =
Remember me
