ಪೀಣ್ಯ ದಾಸರಹಳ್ಳಿ:ವಿಧಾನಸಭಾ ಕ್ಷೇತ್ರದ ಚಾಮುಂಡಿಪುರ, ಮಂಜುನಾಥ ಪಾರ್ಕ್, ಪೀಣ್ಯ 2ನೇ ಹಂತ ಮುಂತಾದೆಡೆ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಜಿ. ಧನಂಜಯ ಗೌಡ ಅವರು ನೂರಾರು ಕಾರ್ಯಕರ್ತರೊಂದಿಗೆ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು.
ಬಳಿಕ ಮಾತನಾಡಿದ ಅವರು, ದಾಸರಹಳ್ಳಿ ಕ್ಷೇತ್ರದಲ್ಲಿ ಕಳಪೆ ರಸ್ತೆಗಳು, ಕುಡಿಯುವ ನೀರಿನ ಸಮಸ್ಯೆ, ಒಳಚರಂಡಿ ಸಮಸ್ಯೆ, ಕೆರೆ ಅಭಿವೃದ್ಧಿ ಕಾಣದೆ ಇರುವುದು ಹೀಗೆ ಹಲವಾರು ಸಮಸ್ಯೆಗಳಿವೆ. ನೂರಾರು ಕೋಟಿ ರೂ. ಅನುದಾನ ಬಂದಿದ್ದರೂ ಇಲ್ಲಿನ ಶಾಸಕರು ಲೂಟಿ ಹೊಡೆದಿದ್ದಾರೆ. ಇದರ ವಿರುದ್ಧವಾಗಿ ಅನೇಕ ಬಾರಿ ಹೋರಾಟ ಮಾಡಿದ್ದೇನೆ. ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿ ಕುಂಠಿತವಾಗಿದೆ. ದಾಸರಹಳ್ಳಿಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಒಮ್ಮೆ ನನಗೆ ಮತ ನೀಡಿ, ಕಾಂಗ್ರೆಸ್ ಬೆಂಬಲಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದು ಗೃಹಲಕ್ಷ್ಮೀ, ಯುವ ನಿಧಿ, 200 ಯೂನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆ ನೀಡಲಾಗುತ್ತದೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ ತೊರೆದ ಕೃಷ್ಣ, ವಿಜಯ್, ಗಂಗಯ್ಯ, ಶಿವಕುಮಾರ್, ಚಿಕ್ಕರಾಮಯ್ಯ, ಶಿವಣ್ಣ, ನಾಗರಾಜಯ್ಯ, ಗಂಗಾಧರಯ್ಯ ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಮುಖಂಡರಾದ ಮುತ್ತುಜಾ, ಉಷಾರಾಣಿ, ಹರೀಶ್, ಗೀತಾ, ಸಂತೋಷ್, ಸುರೇಶ್, ಮಂಜುನಾಥ್, ಜಯಲಕ್ಷ್ಮೀ ಇತರರಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
