ರಾಯಚೂರು:ಜೆಡಿಎಸ್​ ನಗರಸಭೆ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ನಗರದ ಜಾಕೀರ್ ಹುಸೇನ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದಿದೆ.
ರಾಯಚೂರು ನಗರದ ವಾರ್ಡ್ ನಂ 8ರ ಮಕ್ಬೂಲ್ (42) ಕೊಲೆಯಾಗಿರುವ ನಗರಸಭೆ ಸದಸ್ಯ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಸಂಪುಟಕ್ಕೆ ಸರ್ಜರಿ, ಕಾದಿದೆಯಾ ಅಚ್ಚರಿ; ಮತ್ತೆ ದೆಹಲಿಯತ್ತ ಬಿಎಸ್​ವೈ
ಸೋಮವಾರ ರಾತ್ರಿ ಏಕಾಏಕಿ ದಾಳಿ ಮಾಡಿದ ನಾಲ್ಕು ಜನ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಕ್ಬೂಲ್​ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಗಂಭೀರ ಗಾಯದಿಂದ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಮಕ್ಬೂಲ್​ರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಕ್ಬೂಲ್ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ರಾಯಚೂರು ಎಸ್ಪಿ ಪ್ರಕಾಶ್ ನಿಕ್ಕಮ್, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
VIDEO| ಪತ್ನಿಯನ್ನು ಎಳೆದಾಡಿ ಹಲ್ಲೆ ಮಾಡಿದ ಐಪಿಎಸ್​ ಅಧಿಕಾರಿಗೆ ಶಾಕ್​ ಕೊಟ್ಟ ಸರ್ಕಾರ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
