ಹಾಸನ:ಯುವಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್​ ಡಾ. ಸೂರಜ್​ ರೇವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತ ನೀಡಿದ ದೂರನ್ನು ಆಧರಿಸಿ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಸೂರಜ್​ರನ್ನು ಬಂಧಿಸಿದ್ದಾರೆ.
ಸೂರಜ್​ ರೇವಣ್ಣ ಅವರು ತಮ್ಮ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್​​ ಕಾರ್ಯಕರ್ತರೊಬ್ಬರು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನನ್ವಯ ಡಾ. ಸೂರಜ್​ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ದೂರು ದಾಖಲಿಸಿದ ಬಳಿಕ ವಿಚಾರಣೆಗೆಂದು ಹಾಸನದ CEN ಪೊಲೀಸ್​ ಠಾಣೆಗೆ ಆಗಮಿಸಿದ ಸೂರಜ್​ರನ್ನು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳು ಬಳಿಕ ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ಸೂರಜ್​ರನ್ನು ನ್ಯಾಯಧೀಶರ ಮುಂದೆ ಹಾಜರುಪಡಿಸಲಾಗುವುದು. ಇತ್ತ ಸಂತ್ರಸ್ತನನ್ನು ಬೆಂಗಳೂರು ಬೌರಿಂಗ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − 6 =
Remember me
