ಬೆಂಗಳೂರು:ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿನಾಡಪ್ರಭು ಕೆಂಪೆಗೌಡರ ಪ್ರತಿಮೆಯ ಅನಾವರಣ ಕಾರ್ಯಕ್ರಮ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಶಿಷ್ಟಾಚಾರದೊಂದಿಗೆ ಆಹ್ವಾನಿಸದೆ ಇದ್ದದ್ದು ಜೆಡಿಎಸ್ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯಿಂದ ಸಿಟ್ಟಿಗೆದ್ದ ಜೆಡಿಎಸ್ ಸಂಸದ ಟಿ. ಎ ಶರವಣ, ಪಕ್ಷದ ಕಾರ್ಯಕರ್ತರೊಂದಿಗೆ ಉದ್ಘಾಟನೆ ಆದ ಪ್ರತಿಮೆ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ಸಂಸದ ಶರವಣ ‘ಮುಖ್ಯಮಂತ್ರಿಗಳು ಶಿಷ್ಟಚಾರದೊಂದಿಗೆ ದೇವೇಗೌಡರಿಗೆ ಆಹ್ವಾನ ನೀಡಿಲ್ಲ. ಕಾರ್ಯಕ್ರಮಕ್ಕೆ ಒಂದು ದಿನ ಮೊದಲು ಮಧ್ಯರಾತ್ರಿ 12.30ಕ್ಕೆ ಚಾಲಕರೊಬ್ಬರ ಮೂಲಕ ಆಹ್ವಾನ ಪತ್ರಿಕೆ ಕಳಿಸಿದ್ದಾರೆ. ಅಷ್ಟೇ ಅಲ್ಲದೇ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡರ ಹೆಸರೇ ಇಲ್ಲ. ದೇಶದ ಮಾಜಿ ಪ್ರಧಾನಿ ಒಬ್ಬರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೇ ನಾಡಪ್ರಭುವಿಗೆ ಬಿಜೆಪಿ ಸರ್ಕಾರ ಅವಮಾನ ಮಾಡಿದೆ’ ಎಂದು ಶರವಣ ಕೆಂಡ ಕಾರಿದರು.
ಪ್ರೊಟೊಕಾಲ್​ ಪ್ರಕಾರ ನನ್ನ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇರಬೇಕಿತ್ತು: ಸಿದ್ಧರಾಮಯ್ಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 2 =
Remember me
