ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಜೆಡಿಎಸ್​ ಸೇರುವುದಿಲ್ಲ ಎಂದು ಹೇಳುವ ಮೂಲಕ ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಿರ್ಧಾರಕ್ಕೆ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸೆಡ್ಡು ಹೊಡೆದಿದ್ದಾರೆ.
ಸೋಮವಾರ ನಗರದಲ್ಲಿ ನಡೆದ ಜೆಡಿಎಸ್​ ಪಕ್ಷದ ಚಿಂತನ ಮಂಥನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ಪಕ್ಷಕ್ಕೆ ನಾನು ರಾಜ್ಯಾಧ್ಯಕ್ಷ. ನನ್ನನ್ನು ತೆಗೆದು ಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಪಕ್ಷದ ವರಿಷ್ಠರ ವಿರುದ್ಧ ಗುಡುಗಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ನಾನು ರಾಜ್ಯಾಧ್ಯಕ್ಷ. ನನ್ನನ್ನು ತೆಗೆದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ ಪಕ್ಷ ಒಂದು ಕುಟುಂಬದ ಸ್ವತ್ತಲ್ಲ. ಜಾತ್ಯತೀತತೆ ಜೆಡಿಎಸ್ ಪಕ್ಷದ್ದ ಸಿದ್ಧಾಂತವಾಗಿದೆ. ಆದರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟವನ್ನು ಸೋಲಿಸಲು ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇವೆ ಎಂದು ಪಕ್ಷದಲ್ಲಿ ಒಡಕಿನ ಮುನ್ಸೂಚನೆಯನ್ನು ನೀಡಿದ್ದಾರೆ.
ಇದನ್ನೂ ಓದಿ:ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಕುಮಾರಸ್ವಾಮಿ ಅವರು ಶಾಸಕರಾಗಿರುವುದಕ್ಕೆ ಅವರನ್ನು ಕರೆಸಿ ಅಮಿತ್​ ಷಾ ಮಾತನಾಡಿದ್ದಾರೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮುಸ್ಲಿಮರ ಮತ ಪಡೆದು ಗೆದ್ದಿದ್ದಾರೆ. ಇಲ್ಲದಿದ್ದರೆ ಸೋತು ಮನೆ ಸೇರುತ್ತಿದ್ದರು. ನಾವು ಮೈತ್ರಿ ಮಾಡಿಕೊಂಡರೆ ನಾಲ್ಕು ಸೀಟು ಸಿಗುತ್ತದೆ. ಒಂದು ವೇಳೆ ನಾವು ಮೈತ್ರಿ ಮಾಡಿಕೊಳ್ಳದಿದ್ದರೆ ರಾಜ್ಯದಲ್ಲಿ ಶಕ್ತಿ ಪ್ರದರ್ಶನ ಮಾಡಬಹುದಿತ್ತು. ಈಗಲೂ ಕೋರ್ ಕಮಿಟಿ ಸಭೆ ಮಾಡಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡೋಣ ಎಂದಿದ್ದಾರೆ.
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಹೋಗಲು ನಿರ್ಧರಿಸಿದ್ದರೆ ಹೋಗಲಿ ಬಿಡಿ. ನಾವು ಅವರಿಗೆ ಹೋಗಬೇಡಿ ಎಂದು ಹೇಳುತ್ತಿದ್ದೇವೆ. ಒಂದು ವೇಳೆ ಅವರು ಹೋದರೆ ನಾವು ಏನು ಮಾಡಲಿಕ್ಕೆ ಸಾಧ್ಯವಿಲ್ಲ. ಬಿಜೆಪಿಯೊಂದಿಗಿನ ಮೈತ್ರಿ ಸುದ್ದಿ ಹೊರಬರುತ್ತಿದ್ದಂತೆ ಹಲವರು ಪಕ್ಷ ತೊರೆದಿದ್ದಾರೆ. ಈ ನಿಟ್ಟಿನಲ್ಲಿ ಆದರೂ ಕುಮಾರಸ್ವಾಮಿ ಹಾಗೂ ದೇವೇಗೌಡರು ಕ್ರಮ ಕೈಗೊಳ್ಳಬೇಕು.
ನನ್ನದು ಒರಿಜಿನಲ್ ಜೆಡಿಎಸ್. ನಮ್ಮದು ಜಾತ್ಯತೀತ ಜೆಡಿಎಸ್. ನಮ್ಮ ಪಕ್ಷದ ನಿರ್ಧಾರ ಮೈತ್ರಿಗೆ ಒಪ್ಪಿಗೆ ಇಲ್ಲ. ಶಾಸಕರ ಜೊತೆ ಒನ್ ಟು ಮಾತಾಡ್ತೀನಿ. ಶಾಸಕರು ನನ್ನ ಜೊತೆ ಮಾತಾಡಿದ್ದಾರೆ. ಯಾರು ನನ್ನ ಜತೆ ಮಾತನಾಡಿದ್ದಾರೆ ಎಂದು ಈಗಲೇ ಬಹಿರಂಗಪಡಿಸುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದ್ದಾರೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಟ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:nineteen − 1 =
Remember me
