
ಬೆಂಗಳೂರು:ಜೆಡಿಎಸ್ ಕಚೇರಿಗೆ ಸಂಸದ ಮತ್ತು ಬೆಂಗಳೂರು ಕೇಂದ್ರದ ಬಿಜೆಪಿ ಕ್ಷೇತ್ರದ ಅಭ್ಯರ್ಥಿಯಾದ ಪಿ.ಸಿ.ಮೋಹನ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಭೇಟಿ ನೀಡಿದ್ದರು.ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ತಿಪ್ಪೇಸ್ವಾಮಿ, ಮಾಜಿ ಸದಸ್ಯರಾದ ರಮೇಶ್‌ಗೌಡ ಅವರು ಇಬ್ಬರು ಅಭ್ಯರ್ಥಿಗಳನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ.ಸಿ.ಎನ್.ಮಂಜುನಾಥ್, ಪ್ರಧಾನಿಗಳಾದ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಜೋಡಿ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಲಿದೆ. ಎರಡೂ ಪಕ್ಷಗಳು ಹಾಲು ಜೇನಿನಂತೆ ಸಮ್ಮಿಳಿತವಾಗಿ ಕೆಲಸ ಮಾಡುತ್ತಿವೆ ಎಂದರು.ಮಹಿಳಾ ಮೀಸಲು ಮಸೂದೆಯನ್ನು ಅಂದು ಪ್ರಧಾನಿ ಆಗಿದ್ದ ದೇವೇಗೌಡರು ಸಂಸತ್ತಿನಲ್ಲಿ ಮಂಡಿಸಿದರು. ಇಂದಿನ ಪ್ರಧಾನಿಗಳಾದ ಮೋದಿ ಅವರು ಅದೇ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆದು ಜಾರಿಗೂ ತಂದರು. ಇಂಥ ಜೋಡಿ ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದು. ಇವರಿಬ್ಬರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.ಮೋದಿ ಪ್ರಭಾವಶಾಲಿ ನಾಯಕರು. ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಭಾವಶಾಲಿ ದೇಶವಾಗಿ ಹೊರಹೊಮ್ಮಿದೆ. ಇಡೀ ಜಗತ್ತಿನಲ್ಲಿ ಭಾರತಕ್ಕೆ ಬಹು ಮಹತ್ವದ ಸ್ಥಾನ ಲಭಿಸಿದೆ. ಎನ್ ಡಿ ಎ ಮೈತ್ರಿಕೂಟ ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ ಎಂದರು.ಸಂಸದ ಪಿಸಿ ಮೋಹನ್ ಮಾತನಾಡಿ, ಕರ್ನಾಟಕದ ಆಮೂಲಾಗ್ರ ಅಭಿವೃದ್ಧಿಗೆ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಗೆ ನಾವೆಲ್ಲರೂ ಮನವರಿಕೆ ಮಾಡಿಕೊಡಬೇಕು ಎಂದರು.ಇದೇ ಸಂದರ್ಭದಲ್ಲಿ ಡಾ.ಸಿ.ಎನ್.ಮಂಜುನಾಥ್ ಮತ್ತು ಪಿ.ಸಿ.ಮೋಹನ್ ಅವರನ್ನುಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್‌ಗೌಡ ಸನ್ಮಾನಿಸಿದರು.ಹಿರಿಯ ನಾಯಕರಾದ ಆರ್.ಪ್ರಕಾಶ್, ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − three =
Remember me
