
ಬೆಂಗಳೂರು:ಜೆಡಿಎಸ್ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆಯನ್ನು ಅ.19ರಂದು ಬೆಳಿಗ್ಗೆ 10.30 ಗಂಟೆಗೆ ಜೆ.ಪಿ.ಭವನದಲ್ಲಿ ಕರೆಯಲಾಗಿದೆ.ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಶಾಸಕರು, ಮಾಜಿ ಸಚಿವರು ಮತ್ತು ಮಾಜಿ ಸಚಿವರನ್ನೊಳಗೊಂಡ 22 ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಹಾಜರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ರಾಜಕೀಯ ವಿಷಯಗಳು ಚರ್ಚೆಗೆ ಬರಲಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಬರ ನಿರ್ವಹಣೆಯಲ್ಲಿ ಸರ್ಕಾರದ ವೈಪಲ್ಯವನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸುವುದು ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವುದಕ್ಕೆ ಚರ್ಚೆ ನಡೆಸಲಾಗುವುದು ಎಂದು ಪಕ್ಷದ ಪ್ರಮುಖ ಮುಖಂಡರೊಬ್ಬರು ತಿಳಿಸಿದ್ದಾರೆ.
ಇಬ್ರಾಹಿಂ ವಿಷಯ ಪ್ರಸ್ತಾಪ:ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಬೇಕೆಂಬ ಒತ್ತಡಗಳು ಹೆಚ್ಚಿರುವುದರಿಂದ ಈ ಬಗ್ಗೆಯೂ ಕೋರ್ ಕಮಿಟಿಯಲ್ಲಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅರಮನೆ ಆವರಣದಲ್ಲಿ ದೇವೇಗೌಡರೇ ಕರೆದಿದ್ದ ಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ವಿಷಯವನ್ನು ದೇವೇಗೌಡರು ಪ್ರಸ್ತಾಪಿಸಿ ಮಾತನಾಡಿದ್ದಾರೆ. ಆಗ ಇಬ್ರಾಹಿಂ ಕೂಡ ಹಾಜರಿದ್ದು ಸಮ್ಮತಿ ವ್ಯಕ್ತಪಡಿಸಿದ್ದರು. ಈಗ ತದ್ವಿರುದ್ದವಾಗಿ ಹೇಳಿಕೆ ಕೊಡುವ ಮೂಲಕ ಪಕ್ಷಕ್ಕೆ ಮುಜುಗರ ತರುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಕ್ರಮ ಜರುಗಿಸುವುದು ಸೂಕ್ತ ಎನ್ನುವುದು ಪಕ್ಷದ ಅಭಿಮತ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 19 =
Remember me
