ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿ ಪೂರ್ವ ಸಿದ್ಧತೆ ಹಾಗೂ ಸ್ಥಳೀಯ ಮಟ್ಟದಲ್ಲಿ ಮಿತ್ರಪಕ್ಷ ಬಿಜೆಪಿ ಜತೆ ನಾಯಕರು, ಕಾರ್ಯಕರ್ತರ ಜತೆ ಹೊಂದಾಣಿಕೆ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದರು.
ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು,ಮಾಜಿ ಸಚಿವರು ಇನ್ನಿತರೆ ಮುಖಂಡರು ಭಾಗಿಯಾಗಿದ್ದರು.ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳಷ್ಟೇ ಬಾಕಿ ಉಳಿದಿರುವ ಹಿನೆಲ್ಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಚುನಾವಣೆ ಸಿದ್ಧತೆಗಳನ್ನು ವೇಗಗೊಳಿಸಿರುವ ಕುಮಾರಸ್ವಾಮಿ, ಕ್ಷೇತ್ರ ಹಂಚಿಕೆಯ ಬಗ್ಗೆ ಇನ್ನು ಕೆಲ ದಿನಗಳಲ್ಲಿ ನಿರ್ಧಾರ ಆಗಲಿದೆ. ಆದರೆ ಎಲ್ಲ 28 ಲೋಕಸಭೆ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರು ಪರಸ್ಪರ ಹೊಂದಾಣಿಕೆ, ಸಮನ್ವಯತೆಯಿಂದ ಕೆಲಸ ಮಾಡುವುದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ ಆಗಬೇಕು. ಈ ದೇಶದ ಪ್ರಧಾನಿ ಹಾಗೂ ಮಾಜಿ ಪ್ರಧಾನಿಗಳ ನಡುವೆ ಆಗಿರುವ ಮೈತ್ರಿ ಚರ್ಚೆ ಫಲಪ್ರದವಾಗಿ ಕಾಂಗ್ರೆಸ್ ಆತಂಕಗೊಂಡಿದೆ. ಯಾರೇ ಆಗಲಿ ಪ್ರತಿಷ್ಠೆ ಬದಿಗಿರಿಸಿ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eleven =
Remember me
