ಬೆಂಗಳೂರು:ದಲಿತ ಕುಟುಂಬದ ಭೂಮಿಗೆ ಸಂಬಂಧಪಟ್ಟಂತೆ ದರ್ಪ, ದೌರ್ಜನ್ಯ ಎಸಗಿರುವ ಸಚಿವ ಡಿ.ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು, ಅವರು ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿ ಅವರೇ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬುಧವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ಅವರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಕುಟುಂಬ ಹಾಗೂ ದಲಿತ ಮಹಿಳೆಯ ಮೇಲೆ ಸಚಿವರು, ಮತ್ತವರ ಬಂಟರು ದೌರ್ಜನ್ಯ ಎಸಗಿರುವುದು ಅಮಾನುಷ. ಇದನ್ನು ಜೆಡಿಎಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಎಂದು ಎಚ್.ಎಂ.ರಮೇಶ್ ಗೌಡ ಹೇಳಿದರು.ಸಚಿವ ಡಿ.ಸುಧಾಕರ್ ವರ್ತನೆ ತಪ್ಪು. ಅವರ ಭಾಷೆ ಸರಿ ಇಲ್ಲ. ಮಚ್ಚು ಕೊಡಲಿ ಹಿಡಿದು ಓಡಾಡುತ್ತಿದ್ದೆವು ಎಂದು ಹೇಳಿದರೆ ಅರ್ಥವೇನು? ಸಿಎಂ, ಡಿಸಿಎಂ ಸಚಿವರದ್ದು ತಪ್ಪಿಲ್ಲ ಎನ್ನುತ್ತಾರೆ. ಸಚಿವರ ಮೇಲೆ ಎ್ಐಆರ್ ದಾಖಲೆ ನಂತರ ರಾಜೀನಾಮೆ ನೀಡಬೇಕು. ಸಚಿವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ತನಿಖೆಗೆ ಮುನ್ನವೇ ಸರ್ಕಾರ ಸಮರ್ಥನೆಗೆ ಇಳಿಯುವುದು ಸರಿ ಅಲ್ಲ. ಅದು ದಲಿತ ಕುಟುಂಬಕ್ಕೆ ಮಾಡುವ ಅನ್ಯಾಯ. ವಾಸ್ತವ ಸ್ಥಿತಿ ಹೀಗಿದ್ದಾಗ ದಲಿತರ ಮೇಲೆ ದೌರ್ಜನ್ಯ ನಡೆಸಿದ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಲು ಸಾಧ್ಯವೆ? ಎಂದು ಪ್ರಶ್ನಿಸಿದರು.
ಸಚಿವರು ರಾಜೀನಾಮೆ ನೀಡದಿದ್ದರೆ ನಾವು ರಾಜ್ಯಪಾಲರಿಗೂ ದೂರು ನೀಡುತ್ತೇವೆ. ಅವರು ರಾಜೀನಾಮೆ ನೀಡುವ ತನಕ ಹೋರಾಟ ಮಾಡುತ್ತೇವೆ. ದಲಿತರಿಗೆ ನ್ಯಾಯ ಕೊಡಿಸಲು ಗೃಹ ಸಚಿವರು ವಿಫಲ ಆಗಿದ್ದಾರೆ. ಅಲ್ಲದೆ, ದಲಿತರ ರಕ್ಷಣೆ ಮಾಡಲಾಗದ ಅದೇ ಸಮುದಾಯದ ಗೃಹ ಸಚಿವ ಪರಮೇಶ್ವರ್ ಅವರೂ ರಾಜೀನಾಮೆ ನೀಡಬೇಕು ಎಂದು ರಮೇಶ್ ಗೌಡ ಆಗ್ರಹಿಸಿದರು.ಸಚಿವ ಡಿ.ಸುಧಾಕರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರುಜೆಡಿಎಸ್ ನಗರ ಮುಖಂಡರಾದ ನಾರಾಯಣ ಸ್ವಾಮಿ, ಪ್ರವೀಣ ಕುಮಾರ್, ಹರೀಶ್, ರೇವಣ್ಣ, ಚಂದ್ರಶೇಖರ್ ಸೇರಿದಂತೆ ಹಲವಾರು ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:9 + seventeen =
Remember me
