
ಬೆಂಗಳೂರು:ಜಾಮೀನು ಸಿಕ್ಕ ಬೆನ್ನಲ್ಲಿಯೇ ಹಾಸನಕ್ಕೆ ತೆರಳಲು ಸಿದ್ದವಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಕೊನೆ ಕ್ಷಣದಲ್ಲಿ ತಮ್ಮ ಪ್ರವಾಸವನ್ನು ಮುಂದೂಡಿದ್ದಾರೆ.ರೆವಣ್ಣ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿ ರಾಜಕೀಯ ಷಡ್ಯಂತ್ರ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ತೀವ್ರ ಆಕ್ರೋಶ ಇರುವ ಸಂದರ್ಭದಲ್ಲಿ ಪ್ರವಾಸ ಮಾಡುವುದು ಸರಿಯಲ್ಲ. ಒಂದೆರಡು ದಿನ ಕಳೆದ ಮೇಲೆ ಹಾಸನ ಜಿಲ್ಲೆಗೆ ತೆರಳುವುದು ಸೂಕ್ತ ಎಂದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಮಾರ್ಗದರ್ಶನ ಮಾಡಿದ ಹಿನ್ನೆಲೆಯಲ್ಲಿ ಕೊನೆ ಘಳಿಗೆಯಲ್ಲಿ ತಮ್ಮ ಪ್ರವಾಸವನ್ನು ರದ್ದು ಮಾಡಿದ್ದಾರೆ.ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಇನ್ನೂ ವಿದೇಶದಿಂದ ಬಂದಿಲ್ಲ. ನಡುವೆ ಭವಾನಿ ರೇವಣ್ಣ ಅವರ ವಿಚಾರಣೆ ಆಗುವುದು ಬಾಕಿ ಇದೆ. ಈ ಹಂತದಲ್ಲಿ ಹಾಸನದ ಕಡೆಗೆ ಹೋಗುವುದು ಸರಿಯಲ್ಲ. ಅಲ್ಲಿಗೆ ಹೋದ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳು ಬಹಳ ಮುಖ್ಯವಾಗುತ್ತವೆ. ಆದ್ದರಿಂದ ಸಮಸ್ಯೆಯನ್ನು ಮೈಮೇಲೆ ಎಳೆದುಕೊಳ್ಳುವ ಬದಲು ಪರಿಸ್ಥಿತಿ ಸಮಾಧಾನಕ್ಕೆ ಬಂದ ಮೇಲೆ ನಿರ್ಧರಿಸೋಣ ಎಂದು ಲೀಗಲ್ ಟೀಂ ನೀಡಿದ ಸಲಹೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರೇವಣ್ಣ ಆಪ್ತ ವಲಯ ಸ್ಪಷ್ಟಪಡಿಸಿದೆ.ಜನಪ್ರನಿಧಿಗಳ ನ್ಯಾಯಾಲಯ ನೀಡಿರುವ ಷರತ್ತುಬದ್ದ ಜಾಮೀನು ರದ್ದು ಮಾಡುವಂತೆ ಕೋರಿ ಎಸ್‌ಐಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯೂ ಇದೆ. ಆದ್ದರಿಂದ ಎಲ್ಲವನ್ನೂ ಕಾಯ್ದು ನೋಡಿ ತೀರ್ಮಾನಿಸೋಣ. ಹಾಗಾಗಿ ಸ್ವಲ್ಪ ಸಮಯ ಬೆಂಗಳೂರಿನಲ್ಲಿಯೇ ಇದ್ದು ಸಹಕಾರ ನೀಡುವಂತೆ ಲೀಗಲ್ ಟೀಂ ತಿಳಿಸಿದೆ ಎಂದು ಗೊತ್ತಾಗಿದೆ.ಹೊಳೆನರಸೀಪುರಕ್ಕೆ ಭೇಟಿ ನೀಡಿದ ಬಳಿಕ ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಪ್ರವಾಸ ಮಾಡಲು ರೇವಣ್ಣ ನಿರ್ಧರಿಸಿದ್ದರು. ಕೊನೆ ಕ್ಷಣದಲ್ಲಿ ಎಲ್ಲವೂ ಬದಲಾಗಿದೆ. ಅಲ್ಲಿಯ ತನಕ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಲು ನಿರ್ಧರಿಸದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:14 − 7 =
Remember me
