ಬೆಂಗಳೂರು:ಜೆಡಿಎಸ್ ಕೋರ್ ಕಮಿಟಿ ಆರಂಭಿಸಿರುವ ಪಕ್ಷ ಪುನಶ್ಚೇತನದ ಎರಡನೇ ಹಂತದ ಕಾರ್ಯಕ್ರಮ ಅ.11 ರಿಂದ 13ರ ವರೆಗೆ ಕಿತ್ತೂರು ಕರ್ನಾಟಕ ಭಾಗದಿಂದ ಆರಂಭವಾಗಲಿದೆ.
ಸೆ.26 ಮತ್ತು 27 ರಂದು ಕಲ್ಯಾಣ ಕರ್ನಟಕ ಭಾಗದದಲ್ಲಿ ಸಭೆಗಳನ್ನು ನಡೆಸಲಾಗಿತ್ತು. ಮುಂದುವರಿದ ಭಾಗವಾಗಿ ಎರಡನೇ ಕಾರ್ಯಕ್ರಮ ಕಿತ್ತೂರು ಕರ್ನಾಟಕದಿಂದ ಪ್ರಾರಂಭವಾಗಲಿದೆ.
ಕಿತ್ತೂರು ಕರ್ನಾಟಕ ಭಾಗದಲ್ಲಿ ಅ.11 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದ ಕೋರ್ ಕಮಿಟಿ ಈ ಪಕ್ಷ ಸಂಘಟನಾ ಪ್ರವಾಸ ಕೈಗೊಂಡಿದೆ.
ವಿಭಾಗವಾರು ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿ ಬಹಿರಂಗ ಸಭೆ ನಡೆಸಿತ್ತು.ಕಿತ್ತೂರು ಕರ್ನಾಟಕ ಭಾಗದಲ್ಲಿ ಮೂರು ದಿನ ಪ್ರವಾಸ ಕೈಗೊಂಡು ಆಯಾ ಜಿಲ್ಲೆಯ ಜಿಲ್ಲಾಧ್ಯಕ್ಷರು, ಸ್ಥಳೀಯ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಪಕ್ಷದ ಪದಾಕಾರಿಗಳು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪಕ್ಷದ ಮುಖಂಡರ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಪಕ್ಷದ ಪುನರ್ ಸಂಘಟನೆಗೆ ಸಂಬಂಧಿಸಿದಂತೆ ಕೋರ್ ಕಮಿಟಿ ಅಭಿಪ್ರಾಯ ಸಂಗ್ರಹ ಮಾಡಲಿದೆ.
ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸಂಬಂಸಿದ ಸಭೆಯನ್ನು ಅ.11ರಂದು ವಿಜಯಪುರದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಸಂಬಂಸಿದಂತೆ ಅ.12ರಂದು ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸಲಾಗಿದೆ. ಬೆಳಗಾವಿ ವಿಭಾಗದ ಸಭೆಯನ್ನು ಬೆಳಗಾವಿಯಲ್ಲಿ ನಡೆಸಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 10 =
Remember me
