ಬೆಂಗಳೂರು:ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಮತ್ತು ಇತರ ಸಂಘಟನೆಗಳು ಸೋಮವಾರ(ಸೆ.28) ರಾಜ್ಯ ಬಂದ್​ಗೆ ಕರೆ ನೀಡಿವೆ.
ಸೋಮವಾರ ನಡೆಯುವ ರಾಜ್ಯ ಬಂದ್​ಗೆ ಜೆಡಿಎಸ್​ ಕೂಡ ಸಾಥ್​ ನೀಡಲಿದೆ. ಈ ಬಗ್ಗೆ ಸ್ವತಃ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅವರೇ ಸ್ಪಷ್ಟಪಡಿಸಿದ್ದಾರೆ. ”ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಬಂದ್​ಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿರುತ್ತದೆ” ಎಂದಿದ್ದಾರೆ.ಇದನ್ನೂ ಓದಿರಿಸೆ.28ರಂದು ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಬಂದ್ ನಡೆಸಲು ತೀರ್ಮಾನ
ಕಾಂಗ್ರೆಸ್​ ಕೂಡ ಈ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದೆ. ಈಗಾಗಲೇ ರೈತರ ಪ್ರತಿಭಟನೆಯ ತೀವ್ರತೆ ಅರಿತ ಪೊಲೀಸರು ಸಿಲಿಕಾನ್ ಸಿಟಿ ಸುತ್ತಮುತ್ತ ವಿಗಿ ಬಂದೋಬಸ್ತ್​ ಮಾಡುತ್ತಿದ್ದಾರೆ. 1,500ಕ್ಕೂ ಹೆಚ್ಚು ಸಿವಿಲ್‌ ಹಾಗೂ ಸಂಚಾರಿ ಪೊಲೀಸರು, 2,000ಕ್ಕೂ ಹೆಚ್ಚು ಕೆಎಸ್​ಆರ್​ಪಿ ಹಾಗೂ ಸಿಎಆರ್ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಟೌನ್ ಹಾಲ್, ಮೆಜೆಸ್ಟಿಕ್, ಫ್ರೀಡಂಪಾರ್ಕ್, ತುಮಕೂರು ರಸ್ತೆ, ಮಾಗಡಿ ರಸ್ತೆ, ವಿಧಾನಸೌಧ, ಮೈಸೂರ್ ರೋಡ್, ಹೊಸೂರು ರಸ್ತೆ ಹಾಗೂ ದೇವನಹಳ್ಳಿ ರಸ್ತೆಗಳಲ್ಲಿ ಪೊಲೀಸ್​ ಕಣ್ಗಾವಲಿದೆ.
ದಿನೇಶ್ ಗುಂಡೂರಾವ್​ಗೆ ಕರೊನಾ, ಸದನಕ್ಕೆ ಬಂದವರಲ್ಲಿ ಆತಂಕ

ಮೈಸೂರಲ್ಲಿ ನಕಲಿ ಡಾಕ್ಟರೇಟ್ ದಂಧೆ, ಶಾಸಕನ ಗೌರವ ಡಾಕ್ಟರೇಟ್ ತಡೆದ ಡಿಸಿಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + twelve =
Remember me
