ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಪಿಎಸ್​ಐ ನೇಮಕಾತಿಗಾಗಿ ಸೆ.22ರಂದು ನಡೆಯಲಿರುವ ಪರೀಕ್ಷೆ ಮತ್ತು ಸೆ.29ರಂದು ನಡೆಯಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಯ ವಸ್ತ್ರ ಸಂಹಿತೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಅಭ್ಯರ್ಥಿಗಳು ಪೂರ್ಣ ತೋಳಿನ ವಸ್ತ್ರಗಳು, ಶೂ ಧರಿಸುವುದನ್ನು ನಿಷೇಧಿಸಿದೆ. ಪುರುಷ ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್ ರಹಿತ ಅಂಗಿ ಧರಿಸಲು ಆದ್ಯತೆ ನೀಡಬೇಕು, ಜೇಬುಗಳಿಲ್ಲದಿರುವ ಅಥವಾ ಕಡಿಮೆ ಜೇಬಿರುವ ಪ್ಯಾಂಟ್​ಗೆ ಆದ್ಯತೆ ನೀಡಬೇಕು. ಕುರ್ತಾ ಪೈಜಾಮ ಮತ್ತು ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಕೆಇಎ ಹೇಳಿದೆ.
ಮಹಿಳೆಯರಿಗೆ ಕಾಲುಂಗುರ ಮತ್ತು ಮಂಗಳಸೂತ್ರ ಧರಿಸಲು ಅವಕಾಶವಿದ್ದು ಉಳಿದಂತೆ ಯಾವುದೇ ರೀತಿಯ ಲೋಹದ ಅಭರಣವನ್ನು ಕುತ್ತಿಗೆಯ ಸುತ್ತ ಧರಿಸುವುದು, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸ ಲಾಗಿದೆ. ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್​ಗಳು ಅಥವಾ ಬಟನ್​ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಸಾಧಾರಣ ಚಪ್ಪಲಿಗಳನ್ನು ಧರಿಸಲು ಸೂಚಿಸಲಾಗಿದೆ. ಟೋಪಿ ಮತ್ತು ಮಾಸ್ಕ್, ಪೆನ್ಸಿಲ್, ಪೇಪರ್, ಎರೇಸರ್, ತಿಂಡಿ, ನೀರು, ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೖೆವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ ಎಂದು ಸೂಚಿಸಲಾಗಿದೆ. ಇದೇ ವೇಳೆ ಅಭ್ಯರ್ಥಿಯು ಪ್ರವೇಶ ಪತ್ರ ಮತ್ತು ಸರ್ಕಾರದಿಂದ ಮಾನ್ಯವಾದ ಪೋಟೋ ಗುರುತಿನ ಚೀಟಿ ತರುವುದು ಕಡ್ಡಾಯ ಎಂದು ಕೆಇಎ ಹೇಳಿದೆ.
ಗ್ರಾಮ ಆಡಳಿತ ಹುದ್ದೆಗೆ 5.7 ಲಕ್ಷ ಅರ್ಜಿ ಸಲ್ಲಿಕೆ:ಒಟ್ಟು 402 ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ 66 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ ಕೆಇಎ ತಿಳಿಸಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ 5.7 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಆಜಾನ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + seventeen =
Remember me
