ಹಾಸನ:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಹಾಗೂ ಸರ್ಕಾರದ ಕಠಿಣ ಕ್ರಮ ಕೈಗೊಳ್ಳುವ ಹೇಳಿಕೆ ಅಕ್ಷರಶಃ ಜಾರಿಗೆ ಬರದಿರುವುದರ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಉಂಟಾಗಿರುವ ನಡುವೆಯೇ ಇಂದು ಹಾಡಹಗಲೇ ಮಹಿಳೆಯೊಬ್ಬರ ಕೊಲೆ ನಡೆದಿದೆ.
ಹಾಸನದ ಪೆನ್ಷನ್​ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ. ಆಭರಣ ಅಂಗಡಿಯೊಂದರ ಮಾಲೀಕ ಕುಮಾರ್ ಎಂಬವರ ಪತ್ನಿ ಮಂಜುಳಾ (41) ಕೊಲೆಯಾದ ಮಹಿಳೆ. ಇಂದು ಇವರು ಮನೆಯಲ್ಲಿ ಒಂಟಿಯಾಗಿದ್ದಾಗ ಈ ಹತ್ಯೆ ನಡೆದಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೆನ್ಷನ್​ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನಕ್ಕೆ ಬಂದ ವ್ಯಕ್ತಿ ಈ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಸ್ನಾನಕ್ಕೆಂದು ತೆರಳಿದಾಗಲೇ ಕುಸಿದ ಮನೆ; ಆ ಸಮಯದಲ್ಲಿ ಏಕಾಂಗಿಯಾಗಿದ್ದ ಮಹಿಳೆ ಸಾವು..
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!
ಮಗಳ ಮನೆಯಿಂದ ವಾಪಸ್ ಹೊರಟಿದ್ದ ತಾಯಿ-ಮಗ ಇಬ್ಬರೂ ಮಾರ್ಗಮಧ್ಯೆ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + one =
Remember me
