ಬೆಂಗಳೂರು:ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಮೂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಕಂದಾಯ ಇಲಾಖೆ ವತಿಯಿಂದ ಪ್ರತಿ ತಿಂಗಳ ಮೂರನೆ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ/ತಹಸೀಲ್ದಾರರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ ತಂಡ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮ ಭೇಟಿ ನೀಡಿ ಅಲ್ಲಿಯೇ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು.
ಇದನ್ನೂ ಓದಿ:ಕೋವಿಡ್​ನಿಂದ ಮೃತಪಟ್ಟವರಿಗೆ ಇಲ್ಲಿ ಉಚಿತವಾಗಿ ಅಂತ್ಯಸಂಸ್ಕಾರ; ಈ ಚಿತಾಗಾರಗಳು ಸೋಂಕಿತ ಶವಗಳಿಗೆಂದೇ ಮೀಸಲು
ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ರಾಜ್ಯದಲ್ಲಿ ಅತಿ ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ಮಾಹೆಯ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ, ಏ 17 ರಂದು ಯಾದಗಿರಿ ಜಿಲ್ಲೆಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸುವಿಕೆಯನ್ನು ರದ್ದುಗೊಳಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರಲ್ಲಿ ಅವಿವಾಹಿತ ಅಕ್ಕ-ತಂಗಿ ಅನುಮಾನಾಸ್ಪದ ಸಾವು

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಚುನಾವಣಾ ಪ್ರಚಾರಕ್ಕೆ ನಿಷೇಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + seventeen =
Remember me
