ಬೆಂಗಳೂರು:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್​ ಹಿರೇಮಠ್​ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ ನಿಮ್ಮ ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ ಎಂಬುದಕ್ಕೆ ಉತ್ತರ ನೀಡಿ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದೆ.
ಇದನ್ನೂ ಓದಿ:ಕಾಲೇಜಿನಲ್ಲೇ ಚಾಕುವಿನಿಂದ ಇರಿದು ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಹತ್ಯೆ; ಆರೋಪಿ ಅರೆಸ್ಟ್​
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಜ್ಯ ಬಿಜೆಪಿ ಘಟಕ, ಅರಾಜಕತೆಯೇ ಆಡಳಿತದ ಧ್ಯೇಯ – ಕಾನೂನು ಸುವ್ಯವಸ್ಥೆ ಮಂಗಮಾಯ. ಇದು ಕಾಂಗ್ರೆಸ್​ ಸರ್ಕಾರದ ಆಡಳಿತ ಮಂತ್ರ. ಸಿಎಂ ಸಿದ್ದರಾಮಯ್ಯ ಅವರೇ, ಇದು ಅರಾಜಕತೆಯ ಹಾಗೂ ಓಲೈಕೆ ಆಡಳಿತದ ಪ್ರತಿಫಲವಾಗಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಮೇಲೆ ಫಯಾಜ್ ಚಾಕು ಇರಿದು ಸಾಯಿಸಿದ್ದಾನೆ. ನಿಮ್ಮ ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ ಎಂಬುದಕ್ಕೆ ಉತ್ತರ ನೀಡಿ ಎಂದು ವಾಗ್ದಾಳಿ ನಡೆಸಿದೆ.
ಪ್ರೀತಿ ಮಾಡಲು ನಿರಾಕರಿಸಿದಳು ಎಂಬ ಕಾರಣಕ್ಕೆ ಫಯಾಜ್​ ಎಂಬಾತ ಬಿವಿಬಿ ಕಾಲೇಜಿನಲ್ಲಿ ಎಂಸಿಎ ವ್ಯಾಸಂಗ ಮಾಡುತ್ತಿದ್ದ ನೇಹಾ ಹಿರೇಮಠ್​ಗೆ ಚಾಕುವಿನಿಂದ 9ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ. ಈ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
