ಬೆಂಗಳೂರು:ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ಉದ್ದೇಶಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು. ಮೇಳವನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸಚಿವರಾದ ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಡಾ.ಎಂ.ಸಿ. ಸುಧಾಕರ್, ಬಿ. ನಾಗೇಂದ್ರ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ತಂಡ ರಚಿಸುವ ತೀರ್ವನವನ್ನು ಪ್ರಕಟಿಸಿದರು. ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಪರಿಶೀಲಿಸಲಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗ ಳೊಂದಿಗೆ ರ್ಚಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ ಹಾಗೂ ಕೈಗಾರಿಕೆಗಳ
ಅಗತ್ಯಗಳ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸಿಎಂ ತಿಳಿಸಿದ್ದಾರೆ. ಇದಲ್ಲದೆ, ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿ ರೂಪಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ವಲಯವಾರು, ಜಿಲ್ಲಾವಾರು ಆಯೋಜನೆ: ಜನವರಿಯಲ್ಲಿ ಬೆಂಗಳೂರಲ್ಲಿ ಬಳಿಕ ವಲಯವಾರು ಹಾಗೂ ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ಮೇಳ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಉದ್ಯೋಗ ಮೇಳ ಕುರಿತ ಸಭೆಯ ನಂತರ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ವಿಸõತ ಚರ್ಚೆಯನ್ನು ಸಭೆಯಲ್ಲಿ ನಡೆಸಲಾಯಿತು ಎಂದರು.
ಐಟಿ- ಬಿಟಿ, ಹೋಟೆಲ್, ಉತ್ಪಾದನಾ ವಲಯ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣರಿಗೆ ಹೆಚ್ಚಿನ ಅವಕಾಶ ಸಿಗುವಂತಾಗಬೇಕು. ಇದಕ್ಕಾಗಿ ಕೌಶಲ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎನ್ನುವ ಸಲಹೆ ಸಭೆಯಲ್ಲಿ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದ ರೂಪುರೇಷೆಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಹೇಳಿದರು.
ಕೈಗಾರಿಕಾ ಕ್ಷೇತ್ರ ಸೇರಿದಂತೆ ಇತರೇ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಣ್ಣ ಮತ್ತು ಮಧ್ಯಮ, ಬೃಹತ್ ಕೈಗಾರಿಕಾ, ಯುವಜನ, ಉನ್ನತ ಶಿಕ್ಷಣ, ಕಾರ್ವಿುಕ, ಐಟಿ-ಬಿಟಿ ಸಚಿವರು ಮತ್ತಿತರರು ಉತ್ತಮ ಸಲಹೆಗಳನ್ನು ನೀಡಿದ್ದಾರೆ ಎಂದರು. ಕೈಗಾರಿಕೆಗಳಿಗೆ ಅನುಗುಣವಾಗಿ ಉದ್ಯೋಗದಾತರನ್ನು ಸೃಷ್ಟಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕರ ಮತ್ತು ಸಚಿವರ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
