ಬೆಂಗಳೂರು:ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್. ಆರ್. ರಮೇಶ್ ರವರ ನೇತತ್ವದಲ್ಲಿ, ಎಂ.ಎಲ್.ಆರ್. ಕುಟುಂಬದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿದೆ.ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು ಕಾರ್ಮೆಲ್ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 12,000ಕ್ಕೂ ಹೆಚ್ಚು ಮಂದಿ ಉದ್ಯೋಗಕಾಂಕ್ಷಿಗಳು ಆಗಮಿಸಿದ್ದು ವಿಶೇಷವಾಗಿತ್ತು.
ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯಸಿ, ಪದವಿ, ಸ್ನಾತಕೋತ್ತರ ಪದವಿ, ಐ.ಟಿ.ಐ., ಡಿಪ್ಲೊಮಾ, ಇಂಜನಿಯರಿಂಗ್ ತರಗತಿಗಳಲ್ಲಿ ಉತ್ತೀರ್ಣರಾಗಿರುವ ಮತ್ತು ಅನುತ್ತೀರ್ಣರಾಗಿರುವ ಹಾಗೂ ವಿಶೇಷ ಚೇತನರು ಸೇರಿ ಸುಮಾರು 4,000 ಮಂದಿಗೆ ಬೆಂಗಳೂರು ಮಹಾನಗರದ ಅತ್ಯಂತ ಪ್ರತಿಷ್ಠಿತ ಕಾರ್ಪೊರೇಟ್ ಮತ್ತು ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಿಕೊಡಲಾಯಿತು. ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಥಳದಲ್ಲೇ ನೇಮಕಾತಿ ಆದೇಶ ಪತ್ರ ವಿತರಿಸಿದರು.
ಈ ಉದ್ಯೋಗ ಮೇಳದ ಮತ್ತೊಂದು ವಿಶೇಷವೆಂದರೆ ಬೃಹತ್ ಪ್ರಮಾಣದ ಉದ್ಯೋಗ ಮೇಳ ಕಾಗದ ರಹಿತವಾಗಿರುವುದು. ಈ ಮೂಲಕ ಸದರಿ ಕಾರ್ಯಕ್ರಮ ಲಂಡನ್ ಬುಕ್ ಆ್ ವಲ್ಡ್ ರೆಕಾರ್ಡ್ ದಾಖಲೆಗೆ ಸೇರ್ಪಡೆಯಾಯಿತು. ಲಂಡನ್ ಬುಕ್ ಆ್ ವಲ್ಡ್ ರೆಕಾರ್ಡ್ ಸಂಸ್ಥೆಯ ಮುಖ್ಯಸ್ಥರೂ ಸಹ ಹಾಜರಿದ್ದರು ಹಾಗೂ 200ಕ್ಕೂ ಹೆಚ್ಚು ಕಾರ್ಪೊರೇಟ್ ಮತ್ತು ಎಂ.ಎನ್.ಸಿ ಕಂಪನಿಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
