ರಾಯಚೂರು:ನರೆಗಾ ಕಾಮಗಾರಿ ಯೋಜನೆಯಡಿಯಲ್ಲಿ ಅಕ್ರಮ ಮಾಡಲಾದ 32 ಪಿಡಿಒಗಳು ಶಾಮಿಲಾಗಿದ್ದು, ಅದರಲ್ಲಿ ಜಿಲ್ಲೆಯ 27 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇನ್ನು 5 ಅಧಿಕಾರಿಗಳು ಬೇರೆ ಜಿಲ್ಲೆಗೆ ವರ್ಗಾವಣೆಗೊಂಡ ಕಾರಣ ಅಲ್ಲಿನ ಸಿಇಓಗೆ ಈ ಐವರು ಪಿಡಿಒಗಳನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಲಾಗಿದೆ.
ಇದನ್ನೂ ಓದಿ:ನಾಯಿಗಳಿಂದ ತಪ್ಪಿಸಿಕೊಳ್ಳುವ ವೇಳೆ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಮಕ್ಕಳು ಸಾವು
ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರ ನಡೆದಿರುವ ದೂರು ದಾಖಲಾದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ 33 ಗ್ರಾ.ಪಂಚಾಯಿತಿಗಳಲ್ಲಿ ವಿಶೇಷ ಸಾಮಾಜಿಕ ಪರಿಶೋಧನೆಗೆ ಒಳಪಡಿಸಲಾಗಿತ್ತು. ಮಧ್ಯಂತರ ವರದಿಯಲ್ಲಿ ಕರ್ತವ್ಯಲೋಪ ಮತ್ತು ಹಣ ದುರುಪಯೋಗ ನಡೆದಿರುವುದು ಮೇಲ್ನೋಟಕ್ಕೆ ದೃಢಪಟ್ಟಿತ್ತು.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕಾರ್ಯದರ್ಶಿ ಬಾಲಪ್ಪ ಇತ್ತೀಚೆಗೆ ಅವ್ಯವಹಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನಿರ್ದೇಶಿಸಿದ್ದರು. ಮೇಲಾಧಿಕಾರಿಗಳ ನಿರ್ದೇಶನದ ಹಿನ್ನೆಲೆಯಲ್ಲಿ ಬುಧವಾರ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ದೇವದುರ್ಗ ತಾಲೂಕು ಪಂಚಾಯಿತಿ ಸಿಇಒಗೆ ಅವ್ಯವಹಾರದಲ್ಲಿ ಭಾಗಿಯಾಗಿರುವ ಪಿಡಿಒಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಸೂಚಿಸಿದ್ದರು.
ಇದನ್ನೂ ಓದಿ:6 ತಿಂಗಳಲ್ಲಿ 1420% ಲಾಭ ನೀಡಿದ ಷೇರಿಗೆ ಭಾರಿ ಬೇಡಿಕೆ: ಸ್ಟಾಕ್ ಸ್ಪ್ಲಿಟ್​ಗೆ ಕಂಪನಿ ರೆಡಿಯಾಗಿದ್ದೇಕೆ?
ಪ್ರಸ್ತುತ 27 ಗ್ರಾ.ಪಂ.ಗಳ ಪಿಡಿಒಗಳನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದ್ದು, ದೇವದುರ್ಗ ತಾಲೂಕಿನಲ್ಲಿ ಕಾರ್ಯನಿರ್ವಹಿಸಿ ಬೇರೆ ಜಿಲ್ಲೆಗೆ ವರ್ಗಾವಣೆಗೊಂಡಿರುವ ನಾಲ್ವರು ಪಿಡಿಒಗಳು ಹಾಗೂ ಮುಂಬಡ್ತಿ ಪಡೆದಿರುವ ಒಬ್ಬ ಪಿಡಿಓ ಅನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.
ಸ್ಟಾರ್​ ಹೀರೋ ಚಿತ್ರಕ್ಕೆ ನಾಯಕಿಯ​ ಹುಡುಕಾಟ! ಈ ಇಬ್ಬರು ನಟಿಯರ ಪೈಕಿ ಯಾರಿಗೆ ಸ್ಥಾನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 16 =
Remember me
