ಬೆಂಗಳೂರು:ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಉದ್ದೇಶಿತ ಮಸೂದೆಯನ್ನು ತಡೆ ಹಿಡಿದು, ವಿಸ್ತೃತ ಚರ್ಚೆಯವರೆಗೂ ತೀರ್ಮಾನ ಮುಂದೂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೀರ್ಮಾನ ಸೂಕ್ತವಾಗಿದೆ. ಆದ್ದರಿಂದ ಉದ್ಯಮಿಗಳು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಇದನ್ನೂ ಓದಿ:ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ!
ಈ ಕುರಿತು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರಾಜ್ಯ ಸರ್ಕಾರವು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಿ, ಕನ್ನಡಿಗರಿಗೆ ಉದ್ಯೋಗ ನೀಡಲು ಬದ್ಧವಾಗಿದೆ. ಆದರೆ ಇದರಲ್ಲಿ ಉದ್ಯಮಿಗಳ ಹಿತಕ್ಕೂ ಧಕ್ಕೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Honble CM has taken due cognizance. Bill is withheld until further consultations and due diligence.
Industry leaders needn’t panic as assured.
The government is committed to further creation of jobs, and furthermore for Kannadigas, however in a more amicable manner.https://t.co/KEugiR4gM5
— M B Patil (@MBPatil)July 17, 2024

ಕರ್ನಾಟಕದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ವಿಧೇಯಕಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಮೂಲಕ ವಿಧೇಯಕ ತಂದ ಒಂದೇ ದಿನಕ್ಕೆ ಸರ್ಕಾರ ಉಲ್ಟಾ ಹೊಡೆದಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಕಚೇರಿ ಮಾಹಿತಿ ನೀಡಿದೆ. ” ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಶೇಕಡಾ 50 ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ” ಎಂದು ತಿಳಿಸಿದ್ದಾರೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು.
— Siddaramaiah (@siddaramaiah)July 17, 2024

ಮಸೂದೆಯಲ್ಲೇನಿದೆ? :ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.
ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.
ಕಸ ವಿಲೇವಾರಿ ಟೆಂಡರ್​ನಲ್ಲಿ 15 ಸಾವಿರ ಕೋಟಿ ಲಂಚದ ಆರೋಪ: ಕುಮಾರಸ್ವಾಮಿಗೆ ಡಿಸಿಎಂ ಡಿಕೆಶಿ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + two =
Remember me
