ನೈಋತ್ಯ ರೈಲ್ವೆ ಕ್ರೀಡಾ ಕೋಟದಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುಬ್ಬಳ್ಳಿ ಅಥವಾ ಕರ್ನಾಟಕ ಭಾಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜ.16ರ ಒಳಗೆ ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು: 21ಸ್ಥಳ:ಹುಬ್ಬಳ್ಳಿಹುದ್ದೆಗಳ ವಿವರಬಾಸ್ಕೆಟ್​ ಬಾಲ್​-2ಚೆಸ್​- 1ವಾಟರ್​ ಪೋಲೋ-3ಅಥ್ಲೆಟಿಕ್ಸ್​-3ಬ್ಯಾಡ್ಮಿಂಟನ್​- 1ಕ್ರಿಕೆಟ್​- 5ಗಲ್ಫ್​- 1ವೇಟ್​ ಲಿಫ್ಟಿಂಗ್​- 1ಸ್ವಿಮ್ಮಿಂಗ್-1ಟೇಬಲ್​ ಟೆನ್ನಿಸ್-​ 1ವಾಲಿ ಬಾಲ್​- 2
ವಿದ್ಯಾರ್ಹತೆ:ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಎಸ್​ಎಸ್​ಎಲ್​ಸಿ, ಪಿಯುಸಿ, ಬಿಎಸ್​ಸಿ ಪದವಿ ಅಥವಾ ತತ್ಸಮಾನ ಕೋರ್ಸ್​ ವ್ಯಾಸಂಗ ಮಾಡಿರಬೇಕು. ಅಂತಿಮ ಪರೀಕ್ಷೆಗೆ ಹಾಜರಾಗುತ್ತಿರುವರು ಅಥವಾ ಅಂತಿಮ ಪರೀಕ್ಷೆಯ ಫಲಿತಾಂಶಗಳಿಗಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಯೋಮಿತಿ:ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18, ಗರಿಷ್ಠ ವಯಸ್ಸು 25 ಹೊಂದಿರಬೇಕು. ನೈಋತ್ಯ ರೈಲ್ವೆ ಮಾನದಂಡಗಳ ಪ್ರಕಾರ ವಯೋ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಶುಲ್ಕ:500 ರೂ. ಅರ್ಜಿ ಶುಲ್ಕ ಅನ್ವಯವಾಗಲಿದೆ. ಆದರೆ ಎಸ್​ಸಿ/ಎಸ್​ಟಿ/ಮಹಿಳೆಯರು/ಮಾಜಿ ಸೈನಿಕರು/ಅಲ್ಪಸಂಖ್ಯಾತರು/ಒಬಿಸಿ ಅಭ್ಯರ್ಥಿಗಳಿಗೆ 250 ರೂ. ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಸರಿಯಾದ ಇಮೇಲ್​ ಐಡಿ ಮತ್ತು ಮೊಬೈಲ್​ ಸಂಖ್ಯೆ ನಮೂದಿಸಬೇಕು. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಭಾವಚಿತ್ರ, ರೆಸ್ಯೂಮ್​, ಇತ್ಯಾದಿ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಅಧಿಸೂಚನೆಯಲ್ಲಿ ತಿಳಿಸಿರುವ ಲಿಂಕ್​ನಿಂದ ಅರ್ಜಿಯನ್ನು ಡೌನ್​ಲೋಡ್​ ಮಾಡಿಕೊಂಡು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ. ಅರ್ಜಿ ಶುಲ್ಕ ಪಾವತಿಸಿ. ಎಲ್ಲ ಮಾಹಿತಿ ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ ನಂತರ ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆAssistant Personnel Officer/Rectt., Railway Recruitment Cell, 2nd floor, Old G.M.’s Office Building, Club Road, Hubballi-580023ಇಲ್ಲಿಗೆಜ.16ರಒಳಗೆ ಸಲ್ಲಿಸಬೇಕಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ:16.01.2023ಅಧಿಸೂಚನೆಗೆ:https://bit.ly/3PKbwOEಹೆಚ್ಚಿನ ಮಾಹಿತಿಗಾಗಿ:swr.indianrailways.gov.in
ಶಿವಮೊಗ್ಗದ ಹರ್ಷನ ಮನೆಗೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಭೇಟಿ: ಹರ್ಷನ ಸಾವು ವ್ಯರ್ಥವಾಗಲು ಬಿಡಲ್ಲ…

ತರಕಾರಿ ಕತ್ತರಿಸೋ ಚಾಕು ಇದೆಯಲ್ವಾ ಮನೇಲಿ? ಅದರಿಂದ ಶತ್ರುಗಳ ತಲೆಯನ್ನೂ ಕತ್ತರಿಸಬಹುದು: ಸಾಧ್ವಿ ಪ್ರಜ್ಞಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 19 =
Remember me
