ಬೀದರ್:ಇದು ಆಶ್ಚರ್ಯವಾದರೂ ಸತ್ಯ. ಇತ್ತೀಚೆಗಷ್ಟೇ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬಿಡೆನ್ ಅವರ ಜತೆ ನೈಸ್ ಕಂಪನಿ ಮುಖ್ಯಸ್ಥ ಹಾಗೂ ಮಾಜಿ ಶಾಸಕ ಅಶೋಕ್ ಖೇಣಿ ಬಹಳ ಹಿಂದಿನಿಂದಲೂ ಸ್ನೇಹ ಸಂಬಂಧ ಹೊಂದಿದ್ದಾರೆ!
ಈ ವಿಷಯವನ್ನು ಸ್ವತಃ ಖೇಣಿ ಅವರೇ ಸುದ್ದಿಗಾರರಿಗೆ ತಿಳಿಸಿದ್ದಾರೆ. ‘‘ಜೋ ಬಿಡೆನ್ ನನಗೆ ಪರಿಚಿತರು. ಹಿಂದೊಮ್ಮೆ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ನಾನೇ ಅವರಿಗೆ ಬಿಡೆನ್ ಅವರನ್ನು ಪರಿಚಯ ಮಾಡಿಕೊಟ್ಟಿದ್ದೆ’’ ಎಂದು ಖೇಣಿ ಹೇಳಿದ್ದಾರೆ.
ಅಷ್ಟಕ್ಕೂ ಬಿಡೆನ್- ಖೇಣಿ ಸ್ನೇಹ ಎಷ್ಟು ಹಳೆಯದು ಗೊತ್ತೆ? ಮೂರು ದಶಕಗಳಷ್ಟು ಹಳೆಯದು. ಇದಕ್ಕೆ ಸಾಕ್ಷಿ ಎಂಬಂತೆ ಸ್ವತಃ ಖೇಣಿ ಅವರೇ ತಾವು ಬಿಡೆನ್ ಅವರೊಂದಿಗೆ ಇರುವ 1988ರ ಫೋಟೋ ಬಹಿರಂಗಪಡಿಸಿದ್ದಾರೆ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + seventeen =
Remember me
