ತುಮಕೂರು:ರಜೆ ಕಳೆಯಲು ಊರಿಗೆ ಬಂದಿದ್ದ ಪತ್ರಕರ್ತ ರೋಹಿತ್(36) ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಇಲ್ಲಿನ ಕ್ಯಾತ್ಸಂದ್ರ ಸಮೀಪದ ಸದರನಹಳ್ಳಿಯಲ್ಲಿ ತೋಟವೊಂದರ ಬಾವಿಯಲ್ಲಿ ಈಜಲು ತೆರಳಿದ್ದಾಗ ಘಟನೆ ಸಂಭವಿಸಿದೆ.
ರೋಹಿತ್ ಅವರು ಇಂಗ್ಲಿಷ್​ ಪತ್ರಿಕೆಯೊಂದರ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಜೆ ಇದ್ದ ಕಾರಣಕ್ಕೆ ತಮ್ಮ ತಂದೆಯ‌ ಊರಾದ ಸದರನಹಳ್ಳಿಗೆ ಬಂದಿದ್ದರು. ಸ್ನೇಹಿತರೊಂದಿಗೆ ತಮ್ಮ ತೋಟದ ಬಾವಿಯಲ್ಲಿ ಈಜಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಈ ವೇಳೆ ಬಾವಿಯ ಕಲ್ಲು ತಲೆಗೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ, ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
