
ಬೆಂಗಳೂರು:ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದಿಂದ ಶನಿವಾರ ಮಧ್ಯಾಹ್ನ ಮೃತಪಟ್ಟರು. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.ಕೊಡಗಿನ ಮೂಲದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು.ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು.ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.
ಸಂಸದಲ್ಲಿ ಶ್ರದ್ಧಾಂಜಲಿರವೀಂದ್ರ ಕಲಾ ಕ್ಷೇತ್ರದ ಸಂಸ ಬಯಲು ರಂಗಮಂದಿರ ಆವರಣದಲ್ಲಿ ಆರ್.ಜಯಕುಮಾರ್ ಅವರ ಪಾರ್ಥೀವ ಶರೀರವನ್ನು ಇರಿಸಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರೊ.ಸಿದ್ದರಾಮಯ್ಯ, ಪ್ರೊ.ನರಸಿಂಹಮೂರ್ತಿ, ಹಂಸಲೇಖ, ವಿಮಲ, ದಿನೇಶ್ ಅಮೀನ್ ಮಟ್ಟು, ಬಿ.ಕೆ.ಶಿವರಾಂ ಸೇರಿದಂತೆ ಗಣ್ಯರು ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿದ್ದರು. ಒಂದು ನಿಮಿಶ ಮೌನಾಚರಣೆ ಮಾಡಿ ಸಂತಾಪ ವ್ಯಕ್ತಪಡಿಸಲಾಯಿತು.
ಕೆಯುಡಬ್ಲೂಜೆ ಸಂತಾಪ:ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಯನ್ನು ಆರ್.ಜಯಕುಮಾರ್ ಅವರಿಗೆ ಇತ್ತೀಚೆಗೆ ಪ್ರದಾನ ಮಾಡುವ ಮೂಲಕ ಅವರ ವೃತ್ತಿ ಸೇವೆಯನ್ನು ಸ್ಮರಿಸಲಾಗಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + six =
Remember me
