ಶಿಗ್ಗಾವಿ (ಹಾವೇರಿ):ಭಾವೈಕ್ಯದ ನಾಡು ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸುವ ಸಂಬಂಧ ಏರ್ಪಡಿಸಿರುವ “ರೋಡ್ ಶೋ”ಗೆ ಜನಸಾಗರವೇ ಹರಿದು ಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಆಗಮನದ ಹಿನ್ನೆಲೆಯಲ್ಲಿ ಸಹಸ್ರಾರು ಜನರು ಪಟ್ಟಣದ ಕಿತ್ತೂರು ಚನ್ನಮ್ಮ ಸರ್ಕಲ್ ನಲ್ಲಿ ನೆರೆದಿದ್ದಾರೆ. ಮೊದಲಿಗೆ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ರೋಡ್ ಶೋಗೆ ಚಾಲನೆ ನೀಡಲಾಯಿತು. ಸಂತೆ ಮೈದಾನ, ಹಳೇ ಬಸ್ ನಿಲ್ದಾಣ ಮಾರ್ಗದ ಮೂಲಕ ತಾಲ್ಲೂಕು ಕ್ರೀಡಾಂಗಣ ತಲುಪಲಿದೆ.
ಇದನ್ನೂ ಓದಿ:77 ವರ್ಷದ ಬಳಿಕ ಗ್ರಾಮಕ್ಕೆ ಭೇಟಿ ಕೊಟ್ಟ 98 ವರ್ಷದ ವೃದ್ಧ!; ಮುಂದೆ ಆಗಿದ್ದೇನು?
ತಾಲ್ಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಬಹಿರಂಗ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದ್ದಾರೆ.ಮೆರವಣಿಗೆಯಲ್ಲಿ ಜಗ್ಗಲಿಗೆ ತಂಡ, ಜನಪದ ಕಲಾ ತಂಡಗಳು ಗಮನ ಸೆಳೆಯುತ್ತಿವೆ.
ಸುಡು ಬಿಸಿಲನ್ನು ಲೆಕ್ಕಿಸದೆ ಜನರು ಕಿಚ್ಚ ಸುದೀಪ್ ಅವರನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಸಚಿವರಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಇತರರಿದ್ದರು.
ಐಷಾರಾಮಿ ಮನೆ ಖರೀದಿಸಿದ ನಟ ಉಪೇಂದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − nine =
Remember me
