ಬೆಂಗಳೂರು:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.
ಜ.5 ರಂದು ಮಧ್ಯಾಹ್ನ ತುಮಕೂರಿನಲ್ಲಿ, ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ. ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಬಳಿಕ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿಯ ನಂತರ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜ.6ರಂದು ಬೆಳಗ್ಗೆ ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು ಎಂದು ನಿರ್ಮಲ್‍ಕುಮಾರ್ ಸುರಾಣ ಅವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + nineteen =
Remember me
