ಕಲಬುರಗಿ:ನಿನ್ನೆ ಸಂಜೆ ಕಲಬುರಗಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಪತ್ನಿ ನಾಪತ್ತೆಯಾಗಿದ್ದರು. ಆದರೆ ಇದೀಗ ಅವರು ಮುಂಬೈನಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕಲಬುರಗಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಮನಪ್ಪ ಬಮ್ಮನಗಿ ಎನ್ನುವವರ ಪತ್ನಿ ಅನೀತಾ ಕಲಬುರಗಿಯ ಜೂಡಿಶಿಯಲ್ ಕ್ವಾಟರ್ಸ್ 5ರಿಂದ ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು.
ಅನೀತಾ ನಿನ್ನೆ ರಾತ್ರಿ ಮುಂಬೈನಲ್ಲಿ ಪತ್ತೆಯಾಗಿದ್ದು ಪೊಲೀಸರು ನ್ಯಾಯಾಧೀಶರ ಸಂಬಂಧಿಕರಿಗೆ ಅವರನ್ನು ಒಪ್ಪಿಸಿದ್ದಾರೆ. ಅನೀತಾ ಅವರು ಮಾನಸಿಕವಾಗಿ ನೊಂದಿದ್ದಾರೆ ಎನ್ನಲಾಗಿದ್ದು ಈ ಕಾರಣಕ್ಕಾಗಿ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ.
ಕಳೆದ ಕೆಲ ತಿಂಗಳಿನಿಂದ ಮಾನಸಿಕವಾಗಿ ಬಳಲುತ್ತಿರುವ ಅನಿತಾ ಟ್ರೈನ್ ಮೂಲಕ ಮುಂಬೈಗೆ ತೆರಳಿದ್ದರು. ನಾಪತ್ತೆ ಆಗಿದ್ದಾರೆ ಎನ್ನುವ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + nineteen =
Remember me
