ಬೆಂಗಳೂರು:ಇತ್ತೀಚಿನ ಪಂಜಾಬ್ ರಾಜ್ಯ ವಿರುದ್ಧ ದವಂದರ್ ಸಿಂಗ್ ಪ್ರಕರಣದ ಸುಪ್ರೀಂಕೋರ್ಟ್ ತೀರ್ಪನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಸಮುದಾಯಗಳ ಮಧ್ಯೆ ಸಾಮರಸ್ಯೆವನ್ನು ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲ ಜಾತಿಗಳಿಗೂ ಎಲ್ಲ ವಿಭಾಗದಲ್ಲೂ ಸಮಪಾಲು ಬೇಕಿದೆ. ಅದು ಸಂವಿಧಾನದ ಆಶಯ. ನ್ಯಾ.ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದೆ. ಇಲ್ಲಿಯವರೆಗೆ ಬಹಿರಂಗವಾಗದಿರುವ ವರದಿಯನ್ನು ಚರ್ಚೆಯಿಲ್ಲದೆ ಶಿಫಾರಸು ಮಾಡಿ ಎನ್ನುವುದು ಅಪ್ರಜಾಸತ್ತಾತ್ಮಕ ಕ್ರಮವಾಗಿದೆ. ಸೋರಿಕೆಯಾಗಿರುವ ಈ ವರದಿಯ ಅಂಶಗಳನ್ನು ಗಮನಿಸಿದಾಗ ಇದಂತೂ ವಾಸ್ತವಕ್ಕೆ ದೂರವಾದ ವರದಿ ಎಂದು ತಿಳಿಯುತ್ತದೆ. ಇದು ತುಂಬ ಹಳೆಯ ಅಂಕಿ-ಅಂಶಗಳನ್ನು ಒಳಗೊಂಡಿರುವುದರಿಂದ ಇದರ ಚರ್ಚೆ ಈಗ ಅಪ್ರಸ್ತುತ. ಈ ವರದಿಯಿಂದ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ;ವಾಹನಗಳಿಗೆ ಫಾಸ್ಟ್ಯಾಗ್​ ಇಲ್ಲದಿದ್ದರೆ ಥರ್ಡ್​ ಪಾರ್ಟಿ ಇನ್ಶುರೆನ್ಸ್​ ಸಿಗೋದಿಲ್ಲ…!
ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರ ನೀತಿ ಕುರಿತಂತೆ ಪ್ರಸ್ತಾಪಿಸಲಾಗಿದೆ, ಈ ಪ್ರಸ್ತಾವನೆಯು ಜಾರಿಯಾದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಮರಣ ಶಾಸನ ಆಗಬಹುದು. ಈ ಬಗ್ಗೆ ಮಾನ್ಯ ನ್ಯಾಯಾಲಯ ಮತ್ತು ಕಾನೂನು ತಜ್ಞರು ಸೂಕ್ತ ಮಾರ್ಗಗಳನ್ನು ಕಂಡುಹಿಡಿಯಬಹುದೆಂದು ಆಶಿಸುತ್ತೇನೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಲ್ಲಿ ಐಕ್ಯತೆ ಬಹುಮುಖ್ಯವಾಗಿದ್ದು ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಸಮಾಜದಲ್ಲಿ ಸಹಬಾಳ್ವೆಯಿಂದ ಇರಲು ಕೋರುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಈ ನಡುವೆ ಪರಿಶಿಷ್ಟ ಜಾತಿ, ಪಂಗಡ, ಬಂಜಾರ, ಭೋವಿ, ಕೊರಚ, ಕೊರಮ, ಅಲೆಮಾರಿ ಸಮುದಾಯದ ಮುಖಂಡರು ಸಚಿವ ಪ್ರಭು ಚವ್ಹಾಣ್ ಭೇಟಿ ಮಾಡಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಚರ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿಯಾಗಿ ಚವ್ಹಾಣ್​ ಚರ್ಚೆ ನಡೆಸಿದ್ದಾರೆ. ಈ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ. ಸದ್ಯಕ್ಕೆ ಯಾವುದೇ ಜಾತಿಗಳಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ. ಯಾರೂ ಆತಂಕ ಪಡುವ ಆಗತ್ಯವಿಲ್ಲ ಎಂದು ಕಾರಜೋಳ ಭರವಸೆ ನೀಡಿದ್ದಾಗಿ ಚವ್ಹಾಣ್​ ತಿಳಿಸಿದ್ದಾರೆ.
https://www.vijayavani.net/prime-minister-modis-donations-so-far-total-rs-103-crore/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − three =
Remember me
