ಬೆಂಗಳೂರು:ಕೊಲೆ ಕೇಸ್​ನಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ​ ಬಂಧನದ ಸುದ್ದಿ ಕೇಳಿ ಇಡೀ ಸ್ಯಾಂಡಲ್​ವುಡ್ ಶಾಕ್ ಆಗಿದೆ. ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪರ-ವಿರೋಧ ಚರ್ಚೆಗಳು ಜೋರಾಗಿದೆ.
ಇದನ್ನೂ ಓದಿ:ಕೊಲೆ ಕೇಸ್; ‘ಚಾಲೆಂಜಿಂಗ್ ಸ್ಟಾರ್’ ನಟ ದರ್ಶನ್​ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ರೀಟ್ವೀಟ್ ಮಾಡಿದ ನಟಿ ರಮ್ಯಾ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕನ್ನಡದ ನಟ-ನಟಿಯರು ಕೂಡ ಸೋಶಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ. ಈ ನಡುವೆ ನಟ ದರ್ಶನ್‌ಗೆ ಜೀವಾವಧಿ ಶಿಕ್ಷೆಯಾಗಲಿ ಎಂಬ ಪೋಸ್ಟ್‌ನ ರಿ ಟ್ವೀಟ್‌ ಮಾಡಿದ್ದ ನಟಿ ರಮ್ಯಾ ಇದೀಗ, ಮತ್ತೊಂದು ಟ್ವೀಟ್‌ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕುಟುಂಬದ ಪರ ನಿಂತ ನಟಿ, ಪ್ರಕರಣದಲ್ಲೇ ಯಾರೇ ತಪ್ಪಿತಸ್ಥರಾದರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ಸ್ಯಾಂಡಲ್ ವುಡ್ ನಟಿ ರಮ್ಯಾ, ಇದೀಗ ಮತ್ತೊಂದು ಪೋಸ್ಟ್ ರಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿ ತಂದೆ ದು:ಖದಲ್ಲಿರುವ ವಿಡಿಯೋವನ್ನು ಅಕ್ಷಯ್‌ ಅಕ್ಕಿ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡು, ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಬರೆದುಕೊಂಡಿದ್ದಾರೆ.
ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ ಹೇಳಿದ್ದೇನು?:ದರ್ಶನ್ ಜೊತೆ ನಟಿಸಿರುವ ಸ್ಯಾಂಡಲ್​ವುಡ್​ ನಟಿ ರಮ್ಯಾ ಕೂಡ ಎಕ್ಸ್​ನಲ್ಲಿ ದರ್ಶನ್​ ಬಂಧನ ಪೋಸ್ಟ್ ಒಂದು ರೀಪೋಸ್ಟ್ ಮಾಡಿದ್ದರು. ರಮ್ಯಾ ಮಾಡಿರುವ ರೀಪೋಸ್ಟ್​ನಲ್ಲಿ ಕೊಲೆ ಕೇಸ್​ನಲ್ಲಿ ಅಪರಾಧಿಯಾದವರಿಗೆ ಬೇಲ್ ಸಿಗುತ್ತಾ ಎನ್ನುವ ಮಾಹಿತಿ ಇದೆ. ಭಾರತೀಯ ದಂಡ ಸಂಹಿತೆ ಪ್ರಕಾರ ಇದು ಜಾಮೀನು ರಹಿತ ಅಪರಾಧವಾಗಿದೆ. ಈ ಅಪರಾಧಕ್ಕೆ ಶಿಕ್ಷೆ ಏನಾಗಬಹುದು ಅಂದ್ರೆ ಐಪಿಸಿ ಸೆಕ್ಷನ್ 302ರ ಪ್ರಕಾರ ಜೀವಾವಧಿ ಶಿಕ್ಷೆ ಆಗೊ ಸಾಧ್ಯತೆ. ಜೀವಾವಧಿ ಶಿಕ್ಷೆ ಅಂದ್ರೆ 7 ವರ್ಷದಿಂದ 14 ವರ್ಷ ಶಿಕ್ಷೆ ಪ್ರಮಾಣ ಇರಲಿದೆ ಎಂದು ಬರೆದಿರುವ ಪೋಸ್ಟ್ ಅನ್ನು ರಮ್ಯಾ ರೀಪೋಸ್ಟ್​ ಮಾಡಿದ್ದರು.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌:  ಸಿಬಿಐ ತನಿಖೆಗೆ ಒತ್ತಾಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − two =
Remember me
