ಮಂಗಳೂರು:ಮಾಜಿ ಸಚಿವ ಹಾಗೂ ಜೆಡಿಎಸ್​ ಹಿರಿಯ ನಾಯಕ ಕೆ. ಅಮರನಾಥ ಶೆಟ್ಟಿ(80) ಅವರು ಸೋಮವಾರ ವಿಧಿವಶರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅಮರನಾಥ ಶೆಟ್ಟಿಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
ಜೆಡಿಎಸ್ ಅನ್ನು ಕರಾವಳಿಯಲ್ಲಿ ಕಟ್ಟಿ ಬೆಳೆಸಿದ ರಾಜಕಾರಣಿ ಎಂಬ ಹೆಸರಿಗೆ ಪಾತ್ರರಾಗಿದ್ದರು. ಮೂರು ಬಾರಿ ಮೂಲ್ಕಿ-ಮೂಡಬಿದಿರೆ ಶಾಸಕರಾಗಿದ್ದ ಅಮರನಾಥ ಶೆಟ್ಟಿ, ಪ್ರವಾಸೋದ್ಯಮ-ಮುಜರಾಯಿ ಸಚಿವರಾಗಿದ್ದರು. ಪಂಚಾಯತ್ ಮಟ್ಟದಿಂದ ಸಚಿವ ಸ್ಥಾನದವರೆಗೂ ನಾಯಕರಾಗಿ ಬೆಳದಂತಹ ವಿಶಿಷ್ಠ ರಾಜಕಾರಣಿಯಾಗಿದ್ದರು.
ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.— H D Devegowda (@H_D_Devegowda)January 27, 2020
ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ‌ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)January 27, 2020
ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ‌ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − nine =
Remember me
