ಮಹಾಲಕ್ಷ್ಮೀ ಲೇಔಟ್:ಕ್ಷೇತ್ರದಲ್ಲಿ ಇಂದು ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ನೋಡಿದರೆ, ಇದು ರೋಡ್ ಶೋ ಅಲ್ಲ. ಗೋಪಾಲಯ್ಯ ಅವರ ವಿಜಯೋತ್ಸವದಂತೆ ಕಾಣುತ್ತಿದೆ ಎಂದು ರಾಜ್ಯ ಬಿಜೆಪಿ ಸಹ ಪ್ರಭಾರಿ ಕೆ. ಅಣ್ಣಾಮಲೈ ಹೇಳಿದ್ದಾರೆ.
ಡಾ. ರಾಜಕುಮಾರ್ ಪ್ರತಿಮೆ ಬಳಿಯಿಂದ ಜೆ.ಸಿ. ನಗರ, ಕುರುಬರಹಳ್ಳಿ ಸರ್ಕಲ್ ಮಾರ್ಗವಾಗಿ ಸತ್ಯನಾರಾಯಣ ಚೌಟ್ರಿ ಸರ್ಕಲ್​ವರೆಗೆ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಪರ ಹಮ್ಮಿಕೊಂಡಿದ್ದ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡು ಬೆಂಬಲ ನೀಡುತ್ತಿರುವುದು ಸಂತಸದ ವಿಷಯ. ಈ ಬಾರಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಕ್ಷೇತ್ರದ ಜನತೆ ಗೋಪಾಲಯ್ಯನವರಿಗೆ ಹೆಚ್ಚಿನ ಮತ ನೀಡಿ ಅವರನ್ನು ವಿಜಯಶಾಲಿಯನ್ನಾಗಿ ಮಾಡಬೇಕು ಎಂದರು.
ಇದನ್ನೂ ಓದಿ:ಪ್ರಗತಿಯಲ್ಲಿ ಕ್ರೀಡಾಂಗಣಗಳ ಕಾಮಗಾರಿ: ಮಹದೇವಪುರ ಅಭಿವೃದ್ಧಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ
ಗೋಪಾಲಯ್ಯ ಮಾತನಾಡಿ, ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕರೊನಾ ಸಂದರ್ಭ ಪಟ್ಟ ಶ್ರಮದ ಅರಿವು ಜನತೆಗಿದೆ. ಸಾರ್ವಜನಿಕರಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಲಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬಹುಮತದಿಂದ ಗೆಲ್ಲಿಸಿ, ನಿಮ್ಮ ಸೇವೆಗೆ ಶ್ರಮಿಸಲು ಸಹಕರಿಸಿ ಎಂದು ಕೋರಿದರು.
ಮಾಜಿ ಉಪಮೇಯರ್ ಎಸ್. ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಶಿವಾನಂದಮೂರ್ತಿ ನಾಗರಾಜ್ ಇದ್ದರು.
ಮಹಾಲಕ್ಷ್ಮಿ ಲೇಔಟ್​ ಅಭಿವೃದ್ಧಿಯೇ ನನ್ನ ಧ್ಯೇಯ: ಸಚಿವ ಕೆ. ಗೋಪಾಲಯ್ಯ ಹೇಳಿಕೆ

ಜನರ ಅಭಿವೃದ್ಧಿಯೊಂದೇ ಕೇಂದ್ರ, ರಾಜ್ಯ ಸರ್ಕಾರದ ಗುರಿ: ಸಚಿವ ಕೆ. ಗೋಪಾಲಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
