ಬೆಂಗಳೂರು:ಶಾಸಕನಾಗಿ ಕ್ಷೇತ್ರದ ಜನತೆಯ ಬೇಡಿಕೆಗಳನ್ನು ಅರಿತಿದ್ದೇನೆ. ಜನರ ಕಲ್ಯಾಣಕ್ಕೆ ಆನೇಕ ಉತ್ತಮ ಕಾರ್ಯಕ್ರಮ ಮಾಡಲಾಗಿದೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಧ್ಯೇಯವಾಗಿದೆ ಎಂದು ಮಹಾಲಕ್ಷ್ಮಿ ಲೇಔಟ್​ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಇದನ್ನೂ ಓದಿ:ಯಶವಂತಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ; ಎಸ್​.ಟಿ. ಸೋಮಶೇಖರ್​ ವಿಶ್ವಾಸ
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಫೀನಿಕ್ಸ್​ನಲ್ಲಿ ನಿವಾಸಿಗಳೊಂದಿಗೆ ಚುನಾವಣಾ ಸಂಬಂಧ ಸಭೆ ನಡೆಸಿ ಮಾತನಾಡಿದರು. ಕ್ಷೇತ್ರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ, ರಾಣಿ ಅಬ್ಬಕ್ಕದೇವಿ ಕ್ರೀಡಾಂಗಣ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪಾರ್ಕ್​, ಶ್ರೀ ಶಿವಕುಮಾರ ಸ್ವಾಮೀಜಿ ಪಾರ್ಕ್​, ನವನಂದಿನಿ ಪಾರ್ಕ್​ ಆಸ್ಪತ್ರೆಗಳು, ಹೆರಿಗೆ ಆಸ್ಪತ್ರೆ, ನಮ್ಮ ಕ್ಲಿನಿಕ್​, ಉತ್ತಮ ಗುಣಮಟ್ಟದ ರಸ್ತೆಗಳು ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಶಾಸಕನಾಗಿ ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದರು.
ಇದನ್ನೂ ಓದಿ:ಅಭಿವೃದ್ಧಿಗಾಗಿ ಮತ ನೀಡಿ: ಮಂಜುಳಾ ಲಿಂಬಾವಳಿ ಮನವಿ
ನಮ್ಮೆಲ್ಲರ ನೆಚ್ಚಿನ ನಾಯಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ಮೇಲೆ ಭಾರತಕ್ಕೆ ಹೆಚ್ಚಿನ ಗೌರವ ಸಿಕ್ಕಿದೆ, ವಿಶ್ವದಲ್ಲಿ ದೇಶ ಗುರುತಿಸಿಕೊಂಡಿದೆ ಎಂದರು.
ಕೋವಿಡ್​ ಸಮಯದಲ್ಲಿ ಕ್ಷೇತ್ರದ ಜನರ ಸಂಕಷ್ಟವನ್ನು ಅರಿತು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಆಹಾರ ಕಿಟ್​, ಆರೋಗ್ಯ ಕಿಟ್​, ಆಕ್ಸಿಜನ್​ ಸಿಲಿಂಡರ್​ ವ್ಯವಸ್ಥೆ, ಲಸಿಕೆ, ಮಾತ್ರೆಗಳು ಹೀಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಇದನ್ನೂ ಓದಿ:ಮಳೆಯನ್ನೂ ಲೆಕ್ಕಿಸದೆ ಮತಯಾಚಿಸಿದ ಸಪ್ತಗಿರಿಗೌಡ
ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಾಜಿ ಉಪಮೇಯರ್​ ಎಸ್​. ಹರೀಶ್​, ಸೇತುರಾಮ್​, ಮಹೇಶ್​, ವೆಂಕಟೇಶ್​ಮೂರ್ತಿ, ವಿನೋದ್​, ಡಾ.ಗೋಪಾಲ್​, ಮಂಜುನಾಥ್​ ಸೇರಿ ಬಿಜೆಪಿಯ ಸ್ಥಳಿಯ ಮುಖಂಡರು, ಕಾರ್ಯಕರ್ತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three − one =
Remember me
