ಬೆಂಗಳೂರು:ಮಾಜಿ ಸಚಿವ ಕೆ.ಜೆ.ಜಾರ್ಜ್​ ಅವರಿಗೆ ಸಂಕ್ರಾಂತಿಯ ಹೊಸ್ತಿಲಲ್ಲೇ ಸಂಕಷ್ಟ ಶುರುವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರ್ಜ್​ ಸೇರಿ ಅವರ ಕುಟುಂಬಕ್ಕೂ ಜಾರಿನಿರ್ದೇಶನಾಲಯ ಮಂಗಳವಾರ ಸಮನ್ಸ್​ ನೀಡಿದೆ.​
ಜನವರಿ 16 ರಂದು ವಿಚಾರಣೆಗೆ ಹಾಜರಾಗಲು ಜಾರ್ಜ್​ಗೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಜಾರ್ಜ್ ವಿರುದ್ಧ ಮೂರು ತಿಂಗಳ ಹಿಂದೆ ರವಿಕೃಷ್ಣಾರೆಡ್ಡಿ ಎಂಬುವರು ದೂರು ನೀಡಿದ್ದರು. ಜಾರ್ಜ್ ಸಚಿವರಾಗಿದ್ದಾಗ ದೇಶ-ವಿದೇಶಗಳಲ್ಲಿ ತಮ್ಮ ಮಕ್ಕಳ ಹೆಸರಿನಲ್ಲಿ ಹೂಡಿಕೆ ಮಾಡಿದ್ದಾರೆ. ಆದರೆ, ಈ ಸಂಬಂಧ ಚುನಾವಣಾ ಅಫಿಡವಿಟ್​ನಲ್ಲಿ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಆರೋಪಿಸಿ, ದಾಖಲೆ ಸಮೇತ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಎಂಬುವರು ಇಡಿಗೆ ದೂರು ನೀಡಿದ್ದರು.
ರವಿಕೃಷ್ಣಾ ರೆಡ್ಡಿ ನೀಡಿದ್ದ ದಾಖಲೆಗಳ ಆಧಾರದ ಮೇಲೆ ಇಡಿ ತನಿಖೆ ನಡೆಸಿತ್ತು. ಹೀಗಾಗಿ ಜಾರ್ಜ್, ಪತ್ನಿ ಸುಜಾತಾ, ಪುತ್ರಿ ರೇನಿತಾ ಹಾಗೂ ಪುತ್ರ ರಾಣಗೆ ಡಿಸೆಂಬರ್ 23ರಂದು ಇಡಿ ನೋಟಿಸ್ ನೀಡಿ, ಜನವರಿ 16ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಜಾರ್ಜ್ ಕೇರಳದಿಂದ‌ ಬರಿಗೈಯನಲ್ಲಿ ಬಂದು ಸಾವಿರಾರು ಕೋಟಿ ವ್ಯವಹಾರ ಮಾಡುತ್ತಿದ್ದಾರೆ. ಮಗಳು ಮತ್ತು ಅಳಿಯನ ಹೆಸರಲ್ಲಿ ಅಮೆರಿಕದ ನ್ಯೂಯಾರ್ಕ್ ಹಾಗೂ ಆಸ್ಟ್ರೇಲಿಯಾದಲ್ಲಿ ಆಸ್ತಿ ಇದೆ ಎಂದೂ ರೆಡ್ಡಿ ಆರೋಪಿಸಿದ್ದರು. ಇದೀಗ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಆರೋಪ ಮಾಡಿದ್ದು, ಉತ್ತರ ನೀಡಲು ಹಾಜರಾಗುವಂತೆ ನೋಟಿಸ್​ ನೀಡಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eighteen =
Remember me
