ಬೆಂಗಳೂರು:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್​ ಹೆಗ್ಡೆ ಅವರನ್ನು ಸರ್ಕಾರ ನೇಮಿಸಿದೆ.
ಈ ಸಂಬಂಧ ಇಂದು ಆದೇಶ ಹೊರಡಿಸಿರುವ ಸರ್ಕಾರ, ಕರ್ನಾಟಕ ರಾಜ್ಯ ಹಿಂದುಳಿವ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ ಎಂದು ತಿಳಿಸಿದೆ.
ಉಡುಪಿ ಜಿಲ್ಲೆ ಕುಂದಾಪುರದ ಕೊರ್ಗಿಯವರಾದ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿಯು ಅವಿಭಜಿತ ದಕ್ಷಿಣಕನ್ನಡದಿಂದ ವಿಭಜನೆಗೊಂಡು ಪ್ರತ್ಯೇಕ ಜಿಲ್ಲೆ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬ್ರಹ್ಮಾವರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದ ಜಯಪ್ರಕಾಶ್ ಹೆಗ್ಡೆ, ಬಂದರು ಹಾಗೂ ಮೀನುಗಾರಿಕಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಬಳಿಕ ಕಾಂಗ್ರೆಸ್​ಗೆ ಸೇರಿದ್ದರು. ಉಡುಪಿ-ಚಿಕ್ಕಮಗಳೂರು ಸಂಸದರಾಗಿಯೂ ಆಯ್ಕೆ ಆಗಿದ್ದರು. ನಂತರ ಕಾಂಗ್ರೆಸ್​ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.; ಸ್ಥಾಪನೆಗೆ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nineteen =
Remember me
