ಬೆಂಗಳೂರು:ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆನ್ನಲಾದ ಸಾಹಿತಿ ಭಗವಾನ್​ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿದ ಘಟನೆ ನಗರದ 2 ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಹಿಂದು ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್​ರವರು ಇಂದು ಕೋರ್ಟ್​ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿರಿ:ಪ್ರೇಮಿಗಳಿಬ್ಬರ ಪ್ರೇಮ ವಿವಾಹಕ್ಕೆ ಬಲಿಯಾಯ್ತು ಲಕ್ಷಾಂತರ ರೂ. ಮೌಲ್ಯದ ಅಡಿಕೆ ಗಿಡಗಳು!
ಇದಾದ ಬಳಿಕ ಭಗವಾನ್​ ಅವರು ಕೋರ್ಟ್​ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಅವರು ಮುಖಕ್ಕೆ ಮಸಿ ಬಳಿದಿದ್ದಾರೆ.
ಹಿಂದೂ ಎಂಬ ಶಬ್ದ ಅವಮಾನಕರಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಪ್ರೊ. ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ. ಗ್ರಾಮೀಣ ಜನರಿಗೆ ಹಿಂದು ಎಂದರೆ ಗೊತ್ತೇ ಇಲ್ಲ. ನೀವು ಯಾವ ಧರ್ಮ ಎಂದರೆ ಒಕ್ಕಲಿಗ, ಕುರುಬ ಅಂತ ಜಾತಿಗಳ ಹೆಸರನ್ನಷ್ಟೇ ಹೇಳುತ್ತಾರೆ. ಹಿಂದು‌ ಪದವನ್ನೇ ತೆಗೆದು ಹಾಕಬೇಕು. ನಿಮಗೆ ಮಾನ ಮರ್ಯಾದೆ ಇದ್ದರೆ ಆ ಪದ ತೆಗೆದು ಹಾಕಿ ಎಂದು ಭಗವಾನ್ ಹೇಳಿದ್ದರು.(ದಿಗ್ವಿಜಯ ನ್ಯೂಸ್​)
ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಮುಂದಾದ ದಂಪತಿ: ಆದರೆ, ವಿಧಿಯಾಟವೇ ಬೇರೆ ಇತ್ತು!

ಸಾಯುವ ಮುನ್ನ ಗಂಡ ಗಿಫ್ಟ್​ ಕೊಟ್ಟಿದ್ದ ಚಿನ್ನದ ಸರದ ರಹಸ್ಯ ಸರಗಳ್ಳತನದ ಬಳಿಕ ಬಯಲು!

ಮದುವೆ ನೋಂದಣಿ ಮಾಡಿಸಲು ಹೋದ ಯುವತಿಗೆ ಕಾದಿತ್ತು ಶಾಕ್​: ಬಯಲಾಯ್ತು ಗಂಡನ ಮತ್ತೊಂದು ಮುಖ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
