ಶಿವಮೊಗ್ಗ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಯಲಕ್ಷ್ಮಿ ಅವರ ಭೀಮರಥ ಶಾಂತಿಯ ಸಂಭ್ರಮಾಚರಣೆ ಫೆ.16ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಮಲ್ಲೇಶ್ವರನಗರದ ಜಯಲಕ್ಷ್ಮಿ ಆವರಣದಲ್ಲಿ ನೆರವೇರಲಿದೆ.
ಮಂತ್ರಾಲಯ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳು, ಸಿರಿಗೆರೆ ತರಳುಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಕ್ಷೇತ್ರ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳು, ಬೆಕ್ಕಿನಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಹರಿಹರ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಶೃಂಗೇರಿ ಗೌರಿಗದ್ದೆ ಶ್ರೀ ದತ್ತಾಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಚಿತ್ರದುರ್ಗದ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಚಿತ್ರದುರ್ಗದ ಭಗೀರಥ ಪೀಠ ಮಹಾಸಂಸ್ಥಾನದ ಶ್ರೀ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶಿವಮೊಗ್ಗದ ಬಸವಕೇಂದ್ರದ ಶ್ರೀ ಡಾ. ಬಸವಮರುಳಸಿದ್ಧ ಸ್ವಾಮೀಜಿ, ಕಲ್ಲಗಂಗೂರು ರಾಮಕೃಷ್ಣಾ ವಿವೇಕಾನಂದ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ, ಕೌಲಗುಡ್ಡದ ಶ್ರೀ ಸಿದ್ಧಾಶ್ರಮದ ಶ್ರೀ ಅಮರೇಶ್ವರ ಮಹಾರಾಜರು ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + two =
Remember me
