
ಬೆಂಗಳೂರು:ಮೈಸೂರು ಮಲ್ಲಿಗೆ ಖ್ಯಾತಿಯ ಪ್ರೇಮ ಕವಿ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಅಧ್ಯಕ್ಷ ಸ್ಥಾನಕ್ಕೆ ಖ್ಯಾತ ಸುಗಮ ಸಂಗೀತ ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿರುವ ಈ ಟ್ರಸ್ಟ್ ಕೆ.ಎಸ್.ನರಸಿಂಹಸ್ವಾಮಿ ಅವರ ತವರು ಜಿಲ್ಲೆಯಾದ ಮಂಡ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದೆ.ಕಳೆದ 8 ವರ್ಷಗಳ ಹಿಂದೆ ರಚಿತವಾದ ಟ್ರಸ್ಟ್‌ನ ಮೊದಲ ಅಧ್ಯಕ್ಷರಾಗಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಅಧ್ಯಕ್ಷರಾಗಿದ್ದರು. ಕಳೆದ 2 ವರ್ಷಗಳಿಂದ ಖಾಲಿ ಇದ್ದ ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ಕಿಕ್ಕೇರಿ ಕೃಷ್ಣಮೂರ್ತಿ ಅವರು ನೇಮಕಗೊಂಡಿದ್ದಾರೆ.
ಕೆಎಸ್‌ನ ಸ್ಮಾರಕ ಭವನ: ಕಿಕ್ಕೇರಿಕೆಎಸ್‌ನ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಕಿಕ್ಕೇರಿಯಲ್ಲಿ ಅವರು ವಾಸಿಸಿದ ಮನೆಯ ಜಾಗದಲ್ಲಿ ಕೆಎಸ್‌ನ ಸ್ಮಾರಕ ಭವನ ಮಾಡಬೇಕು ಎನ್ನುವ ಕನಸು ಹೊಂದಿರುವುದಾಗಿ ನೂತನ ಟ್ರಸ್ಟ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ಅವರು ವಿಜಯವಾಣಿಗೆ ತಿಳಿಸಿದ್ದಾರೆ.ಕೆಎಸ್‌ನ ಅವರಿಗೆ ಸ್ಪೂರ್ತಿ ನೀಡಿದ ಕಿಕ್ಕೇರಿಯ ಕೆರೆಗೆ ಕೆಎಸ್‌ನ ಸರೋವರ ಎನ್ನುವ ಹೆಸರಿಡಬೇಕು. ಅವರ ಹೆಸರಿನಲ್ಲಿ ಬಯಲು ರಂಗಮಂದಿರ ನಿರ್ಮಾಣ ಮಾಡಲಾಗಿದ್ದು, ಕಾವ್ಯ ಮತ್ತು ಗಾಯನ ಸ್ಪರ್ಧೆಯನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
